ಸಲಹೆಗಿಂತ ಸಹಕಾರ ಮುಖ್ಯ. ಇನ್ನೊಬ್ಬರಿಗೆ ಮಾಡುವ ಸಹಕಾರ ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ರಾಮಾಯಣ ಮತ್ತು ಮಹಾಭಾರತದಲ್ಲಿ ಬರುವ ಪಾತ್ರಗಳು ಜೀವನ ಮೌಲ್ಯಗಳ ಹಂದರ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಉದಯ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವೈಷ್ಣವಿ ಪ್ರಾರ್ಥಿಸಿ, ನಾಗರತ್ನ ಸ್ವಾಗತಿಸಿ, ವಿಭಿನ್ಯ ಅತಿಥಿಗಳನ್ನು ಪರಿಚಯಿಸಿ, ಚೈತ್ರ ವಂದಿಸಿ, ವರಲಕ್ಷ್ಮಿ ನಿರೂಪಿಸಿದರು.


















































































































