
ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಅವರ ಸಂಸ್ಮರಣಾ ಸಮಾರಂಭವು ಆಗಸ್ಟ್ 22 ರಂದು ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಭಾವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಶುಭ ಸಮಾರಂಭದಲ್ಲಿ ಸಮಾಜಸೇವಕ, ಶಂಕರ್ ಎಲೆಕ್ಟ್ರಿಕಲ್ಸ್ ಸರ್ವಿಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ರಾಜೇಶ್ ಶೆಟ್ಟಿಯವರಿಗೆ ‘ಗೋಪಾಲಕೃಷ್ಣ ಆಸ್ರಣ್ಣಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಿದರು. ಘನ ವೇದಿಕೆಯಲ್ಲಿ ಕಟೀಲು ದೇವಳದ ಪ್ರಧಾನ ಅರ್ಚಕ ಹಾಗೂ ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ, ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ, ಭುವನಭಿರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು.



















































































































