
ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 30ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟೆಂಬರ್ 12ರಂದು ಅಪರಾಹ್ನ 12 ಗಂಟೆಗೆ ಮಂಗಳೂರು ಬಂಟ್ಸ್ ಹಾಸ್ಟೆಲ್ ರಸ್ತೆಯಲ್ಲಿರುವ ಎ.ಜೆ. ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆಯಲಿದೆ. ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಕುಶಲ್ ಎಸ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಅಪರಾಹ್ನ 12 ಗಂಟೆಗೆ ಮುಂಬಯಿಯ ಕೈಗಾರಿಕೋದ್ಯಮಿ, ಯುನೈಟೆಡ್ ರಬ್ಬರ್ ಇಂಡಸ್ಟ್ರೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ಅಜಿತ್ ರೈ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಪ್ರದಾನ ಮಾಡಲಾಗುವುದು. ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಬಿ ಸಚ್ಚಿದಾನಂದ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















































































































