ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಕ್ಕಳು ನವಶಕ್ತಿ, ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬಂಟರ ಸಂಘ ಬೆಂಗಳೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವು ಸೆಪ್ಟೆಂಬರ್ 6ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿಯ ಗೌರವ ಮಾರ್ಗದರ್ಶಕರು, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಅಧ್ಯಕ್ಷ ಪಿ.ಯಚ್ ಪ್ರಕಾಶ್ ಶೆಟ್ಟಿ ನೊಚ್ಚ ವಹಿಸಲಿದ್ದಾರೆ.




ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಜ್ಞಾನಸುಧ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾl ಸುಧಾಕರ ಶೆಟ್ಟಿ ಭಾಗವಹಿಸಲಿದ್ದಾರೆ. ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಟಿನಿ, ಬಂಟರ ಯಾನೆ ನಾಡವರ ಮಾತೃ ಸಂಘದ ಬೆಳ್ತಂಗಡಿ ತಾಲೂಕು ಸಂಚಾಲಕ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿ ಗುತ್ತು ಉಪಸ್ಥಿತರಿರುವರು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.












































































































