ಶಿಕ್ಷಕ ವೃತ್ತಿ ಪರಮ ಶ್ರೇಷ್ಠವಾದುದು. ಉತ್ತಮ ವೈದ್ಯರು, ಇಂಜಿನಿಯರ್ಗಳು, ಲೆಕ್ಕಪರಿಶೋಧಕರು, ವಕೀಲರು ಸೇರಿದಂತೆ ಸಮಾಜಕ್ಕೆ ಅಗತ್ಯವಿರುವ ಉತ್ತಮ ಪ್ರಜೆಗಳನ್ನು ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಆದರ್ಶ ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳಾಗುತ್ತಾರೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ದಿನಕರ ಆರ್ ಶೆಟ್ಟಿ ಬಸ್ರೂರು ಹೇಳಿದರು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಗರದ ಆರ್.ಎನ್ ಶೆಟ್ಟಿ ಮಿನಿ ಸಭಾಭವನದಲ್ಲಿ ಸೆಪ್ಟೆಂಬರ್ 5ರಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಸುರೇಶ್ ಎನ್ ಶೆಟ್ಟಿ ಕಾಳಾವರ ಅವರನ್ನು ಸನ್ಮಾನಿಸಲಾಯಿತು. ಸಂಘದ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿಮನೆ ಶುಭ ಹಾರೈಸಿದರು.




ಸಂಘದ ಅಧ್ಯಕ್ಷ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಹಳ್ನಾಡು, ಮಾಜಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹೊಸಮಠ, ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ನಿತೇಶ್ ಶೆಟ್ಟಿ ಬಸ್ರೂರು ಹಾಗೂ ರಾಜೇಶ್ವರಿ ಎಸ್ ಶೆಟ್ಟಿ ಬೈಲೂರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಹರ್ಕೂರು ಸ್ವಾಗತಿಸಿದರು. ಕೋಶಾಧಿಕಾರಿ ಅರುಣ್ ಶೆಟ್ಟಿ ಕುಂದಾಪುರ ವಂದಿಸಿದರು. ಉಪಾಧ್ಯಕ್ಷ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.












































































































