ಕಳತ್ತೂರು ಗುರ್ಮೆ ಪದ್ಮಾವತಿ ಪಿ ಶೆಟ್ಟಿಯವರ ನಾಲ್ಕನೇಯ ಪುಣ್ಯತಿಥಿಯ ಪ್ರಯುಕ್ತ ಸಮಾಜಸೇವಕ, ರಾಜಕೀಯ ಮುಂದಾಳು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅವರ ಸಹೋದರರ ಸಾರಥ್ಯದಲ್ಲಿ ಕಾಪು ತಾಲೂಕಿನ ಗುರ್ಮೆ ಫೌಂಡೇಶನ್ ವತಿಯಿಂದ ಫೆಬ್ರವರಿ 20 ರಂದು ಸಂಜೆ 4 ಗಂಟೆಗೆ ಗುರ್ಮೆ ಗೋ ವಿಹಾರ ಲೋಕಾರ್ಪಣೆಯು ಜರಗಲಿದೆ. ಉದ್ಘಾಟನೆಯನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಸ್ವಾಮೀಜಿ, ಪೇಜಾವರ ಮಠದ ಸ್ವಾಮೀಜಿ, ಗೌರಿ ಗದ್ದೆಯ ವಿನಯ್ ಗುರೂಜಿ, ಸಚಿವರಾದ ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ, ವಿ ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಎಂ ಆರ್ ಜೆ ಗ್ರೂಪ್ ಛೇರ್ಮನ್ ಕೆ ಪ್ರಕಾಶ್ ಶೆಟ್ಟಿ, ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಡಾ ಮೋಹನ್ ಆಳ್ವ ಅವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನ ಹಾಗೂ ನೊಂದವರಿಗೆ ಸಾಂತ್ವನವೂ ನಡೆಯಲಿದೆ. ಶ್ರೀಕಾಂತ್ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ್ ನೀರುಮಾರ್ಗ ಮತ್ತು ಬಳಗ ಇವರಿಂದ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಭಜನಾ ಸಂಕೀರ್ತನೆ ನಡೆಯಲಿದೆ. ಕಾರ್ಯಕ್ರಮದ ಕೊನೆಗೆ ಶ್ರೀಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟವು ಜರಗಲಿದೆ.