ಜೆಸಿಐ ಕುಂದಾಪುರ ಸಿಟಿ ಆಯೋಜಿಸಿದ ಜೆಸಿಐ ಸಪ್ತಾಹದ ಉದ್ಘಾಟನೆಯಲ್ಲಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ವಿದ್ಯಾದೀವಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕುಂದಾಪುರದ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಡಿ. ಗೌಡ, ಲಯನ್ ಜಿಲ್ಲೆ 317 ಸಿಯ ಪ್ರಥಮ ಉಪ ಗವರ್ನರ್ ಹರಿಪ್ರಸಾದ್ ರೈ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭ ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ, ಜೆಸಿಐ ಸಪ್ತಾಹದ ಸಂಚಾಲಕ ರಾಘವೇಂದ್ರ ಕುಲಾಲ್, ನಿಕಟಪೂರ್ವ ಅಧ್ಯಕ್ಷ ಯುಸೂಫ್ ಸಲೀಮ್, ಜೆಸಿಐ ಪದಾಧಿಕಾರಿಗಳಾದ ನವೀನ್ ಸಂಭ್ರಮ್, ದೀಪಾ ಉಪಸ್ಥಿತರಿದ್ದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಕಿರಣ್ ದೇವಾಡಿಗ ಸ್ವಾಗತಿಸಿ, ಹುಸೇನ್ ಹೈಕಾಡಿ ಪ್ರಸ್ತಾವಿಸಿದರು. ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.















































































































