ಹಗ್ಗ ಜಗ್ಗಾಟ ಸ್ಪರ್ಧೆ : ಸುರತ್ಕಲ್ ಬಂಟರ ಮಹಿಳಾ ತಂಡ ವಿನ್ನರ್ಸ್ ಆ್ಯಂಡ್ ರನ್ನಸ್ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ಬಂಟ ಕ್ರೀಡೋತ್ಸವದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡವು ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಸುಮಾರು 14 ತಂಡಗಳು ಮಹಿಳಾ ವಿಭಾಗದಲ್ಲಿ ಭಾಗವಹಿಸಿತ್ತು. ಸೆಮಿಫೈನಲ್ ಪಂದ್ಯದಲ್ಲಿ ಸುರತ್ಕಲ್ ಮಹಿಳೆಯರ ಎ ತಂಡವು ಪುತ್ತೂರು ಮಹಿಳಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಸುರತ್ಕಲ್ ಬಿ ತಂಡವು ಮಂಜೇಶ್ವರ ಮಹಿಳಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಫೈನಲ್ ನಲ್ಲಿ ಸುರತ್ಕಲ್ ಎ ತಂಡ ವಿನ್ನರ್ ಸುರತ್ಕಲ್ ಬಿ ತಂಡ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಿತು. ಪ್ರಥಮ 25 ಸಾವಿರ ನಗದು ಮತ್ತು ಪ್ರಶಸ್ತಿ, ದ್ವಿತೀಯ 15 ಸಾವಿರ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿತ್ತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ, ಕ್ರೀಡಾ ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ, ಮಾತೃ ಸಂಘದ ಪದಾಧಿಕಾರಿಗಳು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.




ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಗಿರೀಶ್ ಎಂ ಶೆಟ್ಟಿ ಕಟೀಲು ಭಾಗವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಮಾಜಿ ಅಧ್ಯಕ್ಷ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಸಾಂಸ್ಜೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಬಬಿತಾ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿ ಮಾಲತಿ ಜೆ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯೆ ಸವಿತಾ ಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.












































































































