ಕುಂದಾಪುರ ಬಿ.ಬಿ ಹೆಗ್ಡೆ ಕಾಲೇಜು : ಜೆಸಿಐ ಸಪ್ತಾಹ ಉದ್ಘಾಟನಜೆಸಿಐ ಸಪ್ತಾಹದ ಮೂಲಕ ಸಮಾಜಮುಖಿಯಾಗಿ ಸಂಘಟನೆಯೊಂದು ಕಾರ್ಯ ನಿರ್ವಹಿಸುವ ರೀತಿಯನ್ನು ಜೆಸಿಐ ತಿಳಿಸಿಕೊಟ್ಟಿದೆ. ಯುವ ಜನತೆಗೆ ಸಂಘಟನೆಗಳ ಮೂಲಕ ಸಹಕಾರ ಮನೋಭಾವ ಬೆಳೆಸುವ ಜೆಸಿಐನ ಕಾರ್ಯಗಳು ಶ್ಲಾಘನೀಯ ಎಂದು ಕುಂದಾಪುರದ ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ್ ಡಿ. ಗೌಡ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಜೆಸಿಐ ಕುಂದಾಪುರ ಸಿಟಿ ಆಯೋಜಿಸಿದ ಜೆಸಿಐ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ ಜಿಲ್ಲೆ 317 ಸಿಯ ಪ್ರಥಮ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಕಿರಣ್ ದೇವಾಡಿಗ ಸ್ವಾಗತಿಸಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಪ್ರಸ್ತಾವಿಸಿದರು. ಜೆಸಿಐ ಸಪ್ತಾಹದ ಸಂಚಾಲಕ ರಾಘವೇಂದ್ರ ಕುಲಾಲ್, ನಿಕಟಪೂರ್ವ ಅಧ್ಯಕ್ಷ ಯುಸೂಫ್ ಸಲೀಮ್, ಜೆಸಿಐನ ಪದಾಧಿಕಾರಿಗಳಾದ ನವೀನ್ ಸಂಭ್ರಮ್, ದೀಪಾ, ಉಪಸ್ಥಿತರಿದ್ದರು. ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ ರಾವ್ ಕಾರ್ಯಕ್ರಮ ನಿರೂಪಿಸಿದರು.















































































































