ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ 76 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯು ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಗುರುವಾರ ಆಚರಿಸಿತು. ನ್ಯಾಯವಾದಿ, ಎಂ.ಸಿ.ಎಸ್ ಬ್ಯಾಂಕ್ ಅಧ್ಯಕ್ಷರಾದ ಎಂ. ಬಾಹುಬಲಿ ಪ್ರಸಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಮೋದಿಯಿಂದ. ಅವರು ರಾಷ್ಟ್ರ ನಾಯಕ. ಇಡೀ ವಿಶ್ವದ ದೇಶಗಳು ಅವರ ಕಾರ್ಯ ಶೈಲಿ, ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಅವರು ಪ್ರಧಾನಿಯಾದ ಬಳಿಕ ಹಮ್ಮಿಕೊಂಡ ಯೋಜನೆಗಳು, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು.




ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ನಿಡ್ಡೋಡಿ ಚಾವಡಿಮನೆ ಡಾ| ಜಗನ್ನಾಥ ಶೆಟ್ಟಿ ಅವರು ಸ್ವಾಮಿ ವಿವೇಕಾನಂದರು ಆಧ್ಯಾತ್ಮಿಕತೆಯ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿದರೆ, ಪ್ರಧಾನಿ ಮೋದಿಯವರು ಭಾರತದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿದವರು. ವಿಶ್ವ ನಾಯಕ ಮೋದಿಯವರ ಜನ್ಮ ದಿನಾಚರಣೆಯನ್ನು ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಆಚರಿಸಿಕೊಳ್ಳಲು ಸಂಸ್ಥೆಗೆ ಹೆಮ್ಮೆಯಾಗುತ್ತಿದೆ. ಭಿನ್ನ ಸಾಮರ್ಥ್ಯದ ಮಕ್ಕಳನ್ನು ಬೆಳೆಸಿ ವಿದ್ಯಾಭ್ಯಾಸ ಕೊಡುವುದು ಸುಲಭದ ಕೆಲಸವಲ್ಲ. ಆ ನಿಟ್ಟಿನಲ್ಲಿ ಸ್ಪೂರ್ತಿ ಸಂಸ್ಥೆಯ ಅಧ್ಯಕ್ಷರು, ಶಿಕ್ಷಕರ ಶ್ರಮ ಶ್ಲಾಘನೀಯ. ಇಂತಹ ಶಾಲೆಗಳ ಅಭಿವೃದ್ಧಿಗೆ ಸರ್ವರೂ ಕೈ ಜೋಡಿಸಬೇಕೆಂದು ಹೇಳಿದರು ಭಾರತ ಇಂದು ಇಷ್ಟೊಂದು ಬಲಿಷ್ಠವಾಗಲು ಮೋದಿಯವರ ದೂರದೃಷ್ಟಿ,ಯೋಜನೆಗಳೇ ಕಾರಣವೆಂದ ಅವರು ಮೋದಿಯವರು ಹಮ್ಮಿಕೊಂಡ ಜನೋಪಯೋಗಿ ಯೋಜನೆಗಳ ಕುರಿತು ವಿವರಿಸಿದರು.
ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಭಾಸ್ಕರ ದೇವಸ್ಯ, ಬೆಳುವಾಯಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಖಂಡಿಗ ಹಾಗೂ ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬೆಳುವಾಹಿ ಭಾಸ್ಕರ ಆಚಾರ್ಯ ಅವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ ಶೆಟ್ಟಿಗಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸುಚಿತ್ರಾ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ನಂತರ ಮಕ್ಕಳೊಂದಿಗೆ ಸಹ ಭೋಜನ ನಡೆಯಿತು.












































































































