ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಇಂಜಿನಿಯರ್ಸ್ ಡೇ ಪ್ರಯುಕ್ತ ಯುವ ಸಿವಿಲ್ ಇಂಜಿನಿಯರ್ ಆಶ್ರಯ್ ಶೆಟ್ಟಿ ಅವರಿಗೆ ಕೋಟೇಶ್ವರದ ಅವರ ಕಚೇರಿಯಲ್ಲಿ ಸೆಪ್ಟೆಂಬರ್ 15ರಂದು ಸನ್ಮಾನಿಸಲಾಯಿತು. ಸನ್ಮಾನಿಸಿದ ಹಿರಿಯ ಉದ್ಯಮಿ ಯಡಾಡಿ ಮತ್ಯಾಡಿಯ ಲಯನ್ ಎಂ.ಜೆ.ಎಫ್ ಅರುಣ್ ಕುಮಾರ್ ಹೆಗ್ಡೆ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್ ಗಳ ಪಾತ್ರ ಮಹತ್ವದ್ದು. ಮೂಲ ಸೌಕರ್ಯ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ, ಕೃಷಿ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಇಂಜಿನಿಯರಿಂಗ್ ಕೊಡುಗೆ ಇದೆ ಎಂದರು. ಮುಖ್ಯ ಅತಿಥಿಗಳಾದ ಆಸ್ಟ್ರೇಲಿಯಾದ ಉದ್ಯಮಿ ದಯಾನಂದ ಶೆಟ್ಟಿ ಹಾಗೂ ಬಾದಾಮಿಯ ಹೋಟೆಲ್ ಉದ್ಯಮಿ ಲಕ್ಷ್ಮಣ್ ಶೆಟ್ಟಿ ಚುಚ್ಚಿ ಶುಭ ಹಾರೈಸಿದರು.
ಸಂಘದ ಅಧ್ಯಕ್ಷ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಘದ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಶಿರೂರು, ಸದಸ್ಯರಾದ ಹರ್ಷವರ್ಧನ್ ಶೆಟ್ಟಿ ಕಟ್ಕೇರಿ, ರಾಜೇಶ್ ಶೆಟ್ಟಿ ವಕ್ವಾಡಿ, ಅಣ್ಣಪ್ಪ ಶೆಟ್ಟಿ ಕೌಲಾಳಿ, ಅಭಿನ್ ಶೆಟ್ಟಿ ಹಾಗೂ ನಿವೃತ್ತ ಬ್ಯಾಂಕ್ ಅಧಿಕಾರಿ ಶಂಕರ್ ಶೆಟ್ಟಿ, ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಪ್ರದೀಪ್ ಶೆಟ್ಟಿ ಕಾರಿಕಟ್ಟೆ ವಂದಿಸಿದರು. ಕೋಶಾಧಿಕಾರಿ ಅರುಣ್ ಶೆಟ್ಟಿ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.
















































































































