
ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ನ್ಯಾಯವಾದಿ (ಅಡ್ವೊಕೇಟ್) ಡಿ.ಕೆ ಶೆಟ್ಟಿ ಅವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಆಯೋಜಿಸಿದ್ದ ೨೦ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಸನ್ಮಾನಿಸಲಾಯಿತು. ಅಡ್ವೊಕೇಟ್ ಡಿ.ಕೆ. ಶೆಟ್ಟಿ ಅವರು ಈ ಗೌರವವನ್ನು ಬಾಂಬೆ ಬಂಟ್ಸ್ ಅಸೋಸಿಯೇಷನ್ (BBA) ನ 13,೦೦೦ ಸದಸ್ಯರಿಗೆ ಸಮರ್ಪಿಸಿದರು. ಈ ಸಂಧರ್ಭ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.
















































































































