ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಶನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ, ಕ.ಜಾ.ಪ ಪದಾಧಿಕಾರಿಗಳ ಪದಗ್ರಹಣ, ಕೃತಿ ಬಿಡುಗಡೆ, ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಾಜಿ ಸಚಿವ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ ರೇವಣ್ಣ ಉದ್ಘಾಟಿಸಲಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಅಧ್ಯಕ್ಷತೆ ವಹಿಸಲಿದ್ದು, ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತವಿಕ ಭಾಷಣ ಮಾಡುವರು. ರಾಜ್ಯದ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ವಿ.ಇ ಅಬ್ದುಲ್ ಗಪೂರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ವಿವಿಧ ಕ್ಷೇತ್ರಗಳ ಸಾಧಕರಾದ ಯುವ ಉದ್ಯಮಿ ಡಾ| ಸಂದೀಪ್ ಪುರಂದರ ಶೆಟ್ಟಿ, ಡಾ| ಶಿವರಾಂ ಕೆ ಭಂಡಾರಿ, ಪ್ರಸನ್ನ ಕುಮಾರ್, ಎಸ್ ಜಗದೀಶ್ ಚಂದ್ರ ಆಂಚನ್, ಶಾಫಿ ಎಂ ಬoಡಸಾಲೆ ಮತ್ತು ರಾಘವ ಚೇರಾಲ್ ಅವರಿಗೆ ‘ಸಾಧಕ ರತ್ನ’ ಪ್ರಶಸ್ತಿಯನ್ನು ಪ್ರಧಾನ ಮಾಡುವರು. ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಅಧ್ಯಕ್ಷ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಹಿ.ಜಿ ಬೋರಲಿಂಗಯ್ಯ ಕೇರಳ ಘಟಕದ ನೂತನ ಸಾರಥಿಗಳ ಪದಗ್ರಹಣ ಘೋಷಿಸುವರು. ಇದೇ ವೇಳೆ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಲಕ್ಷ್ಮಿ ಮಹೇಶ್ ರಾಜು ಅವರ ‘ಇಲ್ಲಿ- ಇಂತು- ಹೀಗೆ ‘ ಕವನ ಸಂಕಲನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ, ಕವಯಿತ್ರಿ ಲಕ್ಷ್ಮಿ ಕೆ. ಅಧ್ಯಕ್ಷತೆಯಲ್ಲಿ ಬಹುಭಾಷಾ ‘ಕವಿಗೋಷ್ಠಿ’ ನಡೆಯಲಿದೆ..




ಶಾಸಕ ಟಿ.ಜೆ ವಿನೋದ್, ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯ್ಯ ಕಟ್ಟೆ, ಶಿವರೆಡ್ಡಿ ಖ್ಯಾಡೇದ್, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ್, ಕೊಚ್ಚಿ ಚಂಗಂಪುಝ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಟಿ.ಜಿ ರವಿಕುಮಾರ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆ ಮೂಲೆ, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತರಾದ ಸರಿನ್ ಮೊಹಮ್ಮದ್ ಸಿದ್ದಿಕ್ ಪಚ್ಚoಬಳ, ಕ.ಜಾ.ಪ ಕೇರಳ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್ ನಾಸಿ, ಪ್ರಧಾನ ಕಾರ್ಯದರ್ಶಿ ರವಿ ನಾಯ್ಕ್, ಖಜಾಂಚಿ ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿರುವರು. ಬೆಂಗಳೂರಿನ ಡಾ| ಕೆ.ಎನ್ ನಾಗೇಶ್ ಮತ್ತು ತಂಡದವರಿಂದ ‘ಜಾನಪದ ಗಾಯನ’ ಹಾಗೂ ಗಡಿನಾಡಿನ ವಿವಿಧ ಸಾಂಸ್ಕೃತಿಕ ತಂಡಗಳಿಂದ ವೈವಿಧ್ಯಮಯ ಕಲಾ ಪ್ರದರ್ಶನಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.


















































































































