ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ಮಾರ್ಗದರ್ಶನದಲ್ಲಿ ಹಾಗೂ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರ ಸಹಯೋಗದಲ್ಲಿ ಮಾತೃಕಾ ಶಕ್ತಿ ಪೂಜೆ ನಡೆಯಿತು. ಲೋಕ ಕಲ್ಯಾಣಾರ್ಥವಾಗಿ ಹಾಗೂ ಸಕಲ ಭಕ್ತರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಸಂಕಲ್ಪದೊಂದಿಗೆ ನವದುರ್ಗೆಯರ ನಾಮ ಸ್ಮರಣೆಯೊಂದಿಗೆ ಅಮ್ಮನಿಗೆ ಅಕ್ಷರಾರ್ಚನೆ ಸಲ್ಲಿಸುವ ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ ಭಕ್ತಾದಿಗಳಿಂದ ನವದುರ್ಗಾ ಲೇಖನ ಬರೆಯುವ ಅಭಿಯಾನದ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ 9 ಮಂದಿ ಗಣ್ಯರಿಂದ ಸಾಮೂಹಿಕವಾಗಿ ದೀಪ ಬೆಳಗಿಸಲಾಯಿತು. ಬಳಿಕ ಭಕ್ತಾದಿಗಳ ಭಾಗವಹಿಸುವಿಕೆಯೊಂದಿಗೆ ಮಾತೃಕಾ ಶಕ್ತಿ ಪೂಜೆ ಹಾಗೂ ಮಂಗಳಾರತಿ ನೆರವೇರಿಸಲಾಯಿತು.




ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ಬೆಂಗಳೂರು ಎಂ.ಆರ್.ಜಿ ಗ್ರೂಪ್ ಛೇರ್ಮನ್ ಡಾ| ಕೆ ಪ್ರಕಾಶ್ ಶೆಟ್ಟಿ, ಶಂಕರ್ ಎಲೆಕ್ಟ್ರಿಕಲ್ಸ್ ಸರ್ವಿಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ರಾಜೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಚಂದ್ರಶೇಖರ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಮಹಿಳಾ ವಿಭಾಗದ ಅಧ್ಯಕ್ಷೆ ಬೀನಾ ವಾಸುದೇವ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ, ಮುಂಬಯಿ ಕೃಷ್ಣ ಪ್ಯಾಲೇಸ್ ರೆಸಿಡೆನ್ಸಿ ನಿರ್ದೇಶಕಿ ಉಮಾ ಕೃಷ್ಣ ಶೆಟ್ಟಿ ಮತ್ತು ಕೃಷ್ಣ ಶೆಟ್ಟಿ, ಯೂನಿಯನ್ ಆಫ್ ಇಂಡಿಯಾ ಸೀನಿಯರ್ ಪ್ಯಾನೆಲ್ ಕೌನ್ಸಿಲ್ ಶ್ವೇತಾ ಕೃಷ್ಣಪ್ಪ, ಉಡುಪಿ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ವಿಎಸ್ಎಸ್ ಶಿಕ್ಷಣ ಸಂಸ್ಥೆಯ ಛೇರ್ಮನ್ ಪ್ರತಾಪ್ ಹೆಗ್ಡೆ ಮಾರಾಳಿ, ನವೀನ್ ಚಂದ್ರ ಆಳ್ವ ಇರುವೈಲ್ ಗುತ್ತು, ದೀಪ ಬೆಳಗಿದರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಉಪಸ್ಥಿತರಿದ್ದರು.














































































































