ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತುಂಬೆ ವಲಳವೂರಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಚಂದ್ರಹಾಸ ಡಿ ಶೆಟ್ಟಿ ಮಾತನಾಡಿ, ಬಂಟ ಸಮಾಜದ ಪ್ರತಿಯೊಬ್ಬರ ಸಹಕಾರದಿಂದ ಸಮಾಜದ ಏಳಿಗೆಗಾಗಿ ಶ್ರಮಿಸುತ್ತೇನೆ. ಇದು ಹುದ್ದೆ ಅಲ್ಲ ಜವಾಬ್ದಾರಿ ಎಂದು ನಂಬಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಸಂಘದ ಕಡತವನ್ನು ಹಸ್ತಾಂತರಿಸಿ ಪದಗ್ರಹಣ ನೆರವೇರಿಸಿದರು. ನೂತನ ಸಮಿತಿಗೆ ಉಪಾಧ್ಯಕ್ಷರಾಗಿ ಡಾ ಪ್ರಶಾಂತ್ ಮಾರ್ಲ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಜತೆ ಕಾರ್ಯದರ್ಶಿ ರಂಜನ್ ಶೆಟ್ಟಿ ಅರಳ, ಕೋಶಧಿಕಾರಿ ಲೋಕೇಶ್ ಶೆಟ್ಟಿ ಕುಳ, ಜತೆ ಕೋಶಧಿಕಾರಿ ಪ್ರತಿಭಾ ರೈ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ಮಹಿಳಾ ಸಮಿತಿ ಅಧ್ಯಕ್ಷೆ ಆಶಾ ಪಿ ರೈ, ಪದಾಧಿಕಾರಿಗಳಾದ ಸುಮಾ ನವೀನ್ ಶೆಟ್ಟಿ ಜ್ಯೋತಿ ಪಿ ಶೆಟ್ಟಿ, ಜಗದೀಶ್ ಶೆಟ್ಟಿ ಇರಾ ವೇದಿಕೆಯಲ್ಲಿದ್ದರು. ಕಳೆದ ಅವಧಿಯ ಉಪಾಧ್ಯಕ್ಷ ಕಿರಣ್ ಹೆಗ್ಡೆ ಸ್ವಾಗತಿಸಿದರು. ನವೀನ್ ಶೆಟ್ಟಿ ಮುಂಡಾಜೆಗುತ್ತು ವರದಿ ವಾಚಿಸಿದರು. ಜಗನ್ನಾಥ ಚೌಟ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.