ಉದ್ಯೋಗದ ಮೂಲಕ ಬದುಕನ್ನು ಭದ್ರಗೊಳಿಸುವ ಯುವಜನರ ಕನಸು ನನಸಾಗುವಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಆಯೋಜಿಸಿದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇರಿಸಿದ ಪರಿಣಾಮಕಾರಿ ಹೆಜ್ಜೆ ಮಾದರಿಯಾಗಿದೆ ಎಂದು ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಡಾ| ಕೆ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಸೆಂಟರ್ ನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್.ಎಂ.ಎ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ, ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್ ಪೋ -2026ನ್ನು ಉದ್ಘಾಟಸಿ ಮಾತನಾಡಿದರು. ನಿಟ್ಟೆ ಛಾನ್ಸಲರ್ ಎನ್ ವಿಶಾಲ್ ಹೆಗ್ಡೆ ಮಾತನಾಡಿ, ಎಐ ತಂತ್ರಜ್ಞಾನದಿಂದ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಹೆಚ್ಚು ಕಂಪೆನಿಗಳನ್ನು ಕರೆಸುವ ಮೂಲಕ ಯುವ ಜನಾಂಗಕ್ಕೆ ಹೆಚ್ಚಿನ ಉದ್ಯೋಗವಕಾಶ ನೀಡುವ ಪ್ರಯತ್ನ ಶ್ಲಾಘನೀಯ ಎಂದರು. ಮಣಿಪಾಲ ಮಾಹೆಯ ಪ್ರೊ ಛಾನ್ಸಲರ್ ಡಾ. ಎಚ್.ಎಸ್ ಬಲ್ಲಾಳ್ ಪ್ರಧಾನ ಭಾಷಣದಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅವರು ಯುವ ಜನಾಂಗಕ್ಕೆ ಉದ್ಯೋಗವಕಾಶ ಒದಗಿಸುವ ಮೂಲಕ ದಾರಿದೀಪವಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದರು.






ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ 4 ಬೃಹತ್ ಉದ್ಯೋಗ ಮೇಳಗಳಲ್ಲಿ ಸುಮಾರು 3,500 ಅಭ್ಯರ್ಥಿಗಳ ಆಯ್ಕೆಗೊಂಡಿದ್ದರು. ಈ ಬಾರಿ 52 ಕಂಪನಿಗಳು, 1,500ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು. ಕಾಪು ಮತ್ತು ಉಡುಪಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ ಮಾತನಾಡಿದರು. ಮಾಜಿ ಶಾಸಕರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎನ್.ಎಂ.ಎ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣ್ಕರ್, ತರಬೇತಿ ಮತ್ತು ಉದ್ಯೋಗ ನಿಯೋಜನೆ ವಿಭಾಗದ ಭರತ್ ಜಿ ಕುಮಾರ್, ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ನೇತ್ರಾಲಯದ ಡೈರೆಕ್ಟರ್ ಡಾ. ಕೃಷ್ಣಪ್ರಸಾದ್ ಕೂಡ್ಲು, ಬೆಂಗಳೂರು ಕೈಗಾರಿಕೋದ್ಯಮಿ ವಿಜಯ್ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ಕೆಪಿಸಿಸಿ ಕೊ ಆರ್ಡಿನೇಟರ್ ನವೀನ್ ಚಂದ್ರ ಜೆ ಶೆಟ್ಟಿ, ಸಾಯಿರಾಧ ಗ್ರೂಪ್ ನ ಆಡಳಿತ ನಿರ್ದೇಶಕ ಮನೋಹರ್ ಶೆಟ್ಟಿ, ಎಚ್.ಪಿ.ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ನ ಛೇರ್ಮನ್ ಹರಿಪ್ರಸಾದ್ ರೈ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿ, ಟ್ರಸ್ಟ್ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಟ್ರಸ್ಟಿ ಪದ್ಮನಾಭ ಹೆಗ್ಡೆ ವೇದಿಕೆಯಲ್ಲಿದ್ದರು. ಟ್ರಸ್ಟ್ ಖಜಾಂಚಿ ವಿಜಿತ್ ಶೆಟ್ಟಿ ವಂದಿಸಿದರು. ನಿಟ್ಟೆಯ ಪ್ರೋಫೆಸರ್ ಡಾ| ಸುಧೀರ್ ರಾಜ್ ನಿರೂಪಿಸಿದರು.

















































































































