
ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಅಕ್ಟೋಬರ್ 13ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು. ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಆಶ್ರಯದಲ್ಲಿ ಜರಗಿದ ಬಂಟರೆ ಸೇರಿಗೆ ಕಾರ್ಯಕ್ರಮದ ಜಮಾ ಖರ್ಚು ವೆಚ್ಚ ಮಂಡನೆ ನಡೆಯಿತು. ಜೊತೆಗೆ ಎರಡನೇ ವರ್ಷದ ‘ಬಂಟರೆ ಜಾಲ್ ಡ್ ಪಿಲಿ ಪಜ್ಜೆ’ ಕಾರ್ಯಕ್ರಮ ನಡೆಸುವ ಬಗ್ಗೆ ಸಮಾಲೋಚನೆ ಮಾಡಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ‘ಸಹಕಾರ ರತ್ನ’ ದಂಬೆಕ್ಕಾನ ಸದಾಶಿವ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಅಳ್ವ, ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆ ಗುತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ ವಂದಿಸಿದರು. ಸಭೆಯಲ್ಲಿ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.





















































































































