ಪದ್ಮಾವತಿ ಪಿ ಶೆಟ್ಟಿ ಗುರ್ಮೆ ಅವರ 4 ನೇಯ ಪುಣ್ಯತಿಥಿಯ ಸ್ಮರಣಾರ್ಥ ಗುರ್ಮೆ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರದ ಲೋಕಾರ್ಪಣೆ ಯನ್ನು ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗುರ್ಮೆಯಲ್ಲಿ ಉದ್ಘಾಟಿಸಿದರು. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಗೌರಿಗದ್ದೆ ಸ್ವರ್ಣ ಪೀಠಿಕಾಪುರದ ಅವದೂತ ವಿನಯ್ ಗುರೂಜಿ ಅವರು ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್ ಈಶ್ವರಪ್ಪ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಂಸದರಾದ ಬಿ.ವೈ ರಾಘವೇಂದ್ರ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ, ಬೆಂಗಳೂರು ಎಂ.ಆರ್.ಜಿ ಗ್ರೂಪ್ಸ್ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ, ಸಂಗೀತ ನಿರ್ದೇಶಕರಾದ ಗುರುಕಿರಣ್, ಗುರ್ಮೆ ಫೌಂಡೇಶನ್ ನ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 600 ಮಂದಿ ಅನಾರೋಗ್ಯ ಪೀಡಿತರಿಗೆ ಧನ ಸಹಾಯ ವಿತರಣೆ, ಕೊರೋನ ವಾರಿಯರ್ಸ್ ಮತ್ತು ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ಸಂತೋಷ್ ಪಿ ಶೆಟ್ಟಿ ತೆಂಕರಗುತ್ತು ದಂಪತಿಗಳನ್ನು ಮತ್ತು ಸೂರಿ ಶೆಟ್ಟಿ ಕಾಪು ಅವರನ್ನು ಸನ್ಮಾನಿಸಲಾಯಿತು. ಕೀರ್ತನ ಮತ್ತು ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳನ್ನು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಸಹೋದರರು ಸಮರ್ಪಿಸಿದರು.