ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ಕುಂದಾಪುರ ರೋಟರಿ ಕ್ಲಬ್ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ, ಟ್ರಾಫಿಕ್ ಅರಿವು ಕಾರ್ಯಕ್ರಮ ಕಾಲೇಜಿನ ಎ.ವಿ ಹಾಲ್ ನಲ್ಲಿ ನಡೆಯಿತು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡಬಾರದು, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸಬೇಕು, ಪಾದಚಾರಿಗಳಿಗೂ ಆದ್ಯತೆ ನೀಡಬೇಕು. ಸಂಚಾರಿ ನಿಯಮಗಳ ಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಕುರಿತು ವಿಶೇಷ ಮಾಹಿತಿ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕುಂದಾಪುರದ ಕಾರ್ಯದರ್ಶಿ ಅಶೋಕ್ ವಿ ಶೆಟ್ಟಿ ಕೊಡ್ಲಾಡಿ ಆಶಯ ನುಡಿಗಳನ್ನಾಡಿದರು. ಕಾಲೇಜಿನ ರೋಟರಾಕ್ಟ್ ಕ್ಲಬ್ ಸಂಯೋಜಕರಾದ ಗಿರಿರಾಜ್ ಭಟ್ ಸ್ವಾಗತಿಸಿ, ವಿನಯಾ ವಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ವಸಂತಿ ಪ್ರಾರ್ಥಿಸಿ, ಸೂಚನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಿಶ್ವಾಸ್ ವಂದಿಸಿದರು.





















































































































