ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿ, ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗದಲ್ಲಿ ಅಕ್ಟೋಬರ್ 21 ರಂದು ಪುತ್ತೂರು ಬಂಟರ ಭವನದ ಅಂಗಳದಲ್ಲಿ ಕೀರ್ತಿಶೇಷ ಪಿಲಿ ರಾಧಣ್ಣರವರ ಶಾರದಾ ಹುಲಿ ತಂಡದಿಂದ ಎರಡನೇ ವರ್ಷದ ಪಿಲಿ ಪಜ್ಜೆ (ಹುಲಿ ವೇಷ ಕುಣಿತ), ಆಯುಧ ಪೂಜೆ, ಭಜನೆ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ದೀಪ ಬೆಳಗಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ವರ್ಷ ಎರಡನೇ ಬಾರಿಗೆ ನಾವು ಸಂಘದ ಮೂಲಕ ಪಿಲಿ ರಾಧಣ್ಣ ತಂಡದಿಂದ ಹುಲಿ ವೇಷದ ಸೊಬಗನ್ನು ನೋಡುವ ಅವಕಾಶ ಕಲ್ಪಿಸಿದ್ದೇವೆ. ಮುಂದೆಯೂ ಇಂತಹ ಕಾರ್ಯಕ್ರಮ ಆಯೋಜನೆಯನ್ನು ಮಾಡುತ್ತೇವೆ ಎಂದು ಹೇಳಿದರು. ತಾಲೂಕು ಮಹಿಳಾ ಬಂಟರ ವಿಭಾಗದ ಐಸಿರಿ ಭಜನಾ ತಂಡದಿಂದ ಭಜನೆ ನಡೆಯಿತು. ತಂಡವನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಗೌರವಿಸಿದರು .




ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ನಿಕಟಪೂರ್ವ ಸಂಚಾಲಕ ಕುoಬ್ರ ದುರ್ಗಾಪ್ರಸಾದ್ ರೈ, ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆ ಗುತ್ತು, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ಪುತ್ತೂರು ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ, ನಿರ್ದೇಶಕರುಗಳಾದ ಎನ್ ರವೀಂದ್ರ ಶೆಟ್ಟಿ ನುಳಿಯಾಲು, ಶಿವನಾಥ ರೈ ಮೇಗಿನಗುತ್ತು, ರವಿಪ್ರಸಾದ್ ಶೆಟ್ಟಿ ಬನ್ನೂರು, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕರುಗಳಾದ ಜಯಪ್ರಕಾಶ್ ರೈ ನೂಜಿಬೈಲು, ವತ್ಸಲಾ ಪಿ ಶೆಟ್ಟಿ, ಬಂಟರ ಸಂಘದ ಮಾಜಿ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆ, ಬಂಟರ ಸಂಘದ ಜೊತೆ ಕಾರ್ಯದರ್ಶಿಗಳಾದ ಹರಿಣಾಕ್ಷಿ ಜೆ ಶೆಟ್ಟಿ, ಸ್ವರ್ಣಲತಾ ಜೆ ರೈ, ಉದ್ಯಮಿಗಳಾದ ಎಂ.ಆರ್ ಜಯಕುಮಾರ್ ರೈ ವಿತ್ರoಪಾಡಿ, ಸೂರ್ಯನಾಥ ಆಳ್ವ ಮಿತ್ತಳಿಕೆ, ಪ್ರಕಾಶ್ ರೈ ಮನವಳಿಕೆ, ತಾಲೂಕು ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷ ಸಮೃದ್ದ್ ಶೆಟ್ಟಿ ಮತ್ತು ಪದಾಧಿಕಾರಿಗಳು, ತಾಲೂಕು ಯುವ ಬಂಟರ ವಿಭಾಗದ ಉಪಾಧ್ಯಕ್ಷ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು, ಪ್ರಧಾನ ಕಾರ್ಯದರ್ಶಿ ಸಂದೇಶ್ ರೈ, ತಾಲೂಕು ಮಹಿಳಾ ಬಂಟರ ವಿಭಾಗದ ಕೋಶಾಧಿಕಾರಿ ಅರುಣಾ ಡಿ ರೈ ಮತ್ತು ಪದಾಧಿಕಾರಿಗಳು, ಐಸಿರಿ ಭಜನಾ ತಂಡದ ನಯನಾ ರೈ ನೆಲ್ಲಿಕಟ್ಟೆ ಮತ್ತು ತಂಡದವರು ಉಪಸ್ಥಿತರಿದ್ದರು. ಬಂಟರ ಭವನದ ಮೆನೇಜರ್ ರವಿಚಂದ್ರ ರೈ ಕುಂಬ್ರ ಹಾಗೂ ಭಾಸ್ಕರ್ ರೈ ಕಾರ್ಯಕ್ರಮದಲ್ಲಿ ಸಹಕರಿಸಿದರು. ಈ ಸಂದರ್ಭದಲ್ಲಿ ವಾಹನಗಳಿಗೆ ಆಯುಧ ಪೂಜೆ ನಡೆಯಿತು.


















































































































