ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಚುನಾವಣೆಗೆ ಸಂಬಂಧಿಸಿದ ವಿಷಯಗಳು ಎನ್ನುವ ರಸಪ್ರಶ್ನೆ ಸ್ಪರ್ಧೆಯನ್ನು ಅಕ್ಟೋಬರ್ 13 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಮತ್ತು ಚುನಾವಣಾ ಆಯೋಗದ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಶಬ್ದಿಕಾ ಪೂಜಾರಿ ದ್ವಿತೀಯ ಬಿ.ಕಾo (ಡಿ) ಹಾಗೂ ಮೆಲಿಷಾ ಅಲ್ಮೆಡಾ ಪ್ರಥಮ ಬಿ.ಕಾಂ (ಸಿ) ಮತ್ತು ದ್ವಿತೀಯ ಸ್ಥಾನವನ್ನು ರಾಜೇಶ್ವರಿ ಆಲಗುಂಡಿ ದ್ವಿತೀಯ ಬಿ.ಕಾo (ಡಿ) ಹಾಗೂ ಧೀಮಂತ ಶೆಟ್ಟಿ ಪ್ರಥಮ ಬಿಬಿಎ ಪಡೆದುಕೊಂಡಿದ್ದಾರೆ. ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಶ್ರೀಮತಿ ಸುರೇಖಾ ಸ್ಪರ್ಧೆಯನ್ನು ಸಂಯೋಜಿಸಿದರು.





















































































































