
ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಹಾಗೂ ಲಲಿತಾ ಕಲಾ ಸಂಘದ ವತಿಯಿಂದ ಅಕ್ಟೋಬರ್ 19 ರಂದು ದಾಂಡಿಯಾ ಮತ್ತು ಗರ್ಬಾ ನೃತ್ಯ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ದಾಂಡಿಯಾ ಮತ್ತು ಗರ್ಬಾ ನೃತ್ಯಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಆಕರ್ಷಕ ನೃತ್ಯ ಪ್ರದರ್ಶನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರೇವತಿ ಡಿ, ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಸರೋಜಾ, ಲಲಿತಾ ಕಲಾ ಸಂಘದ ಸಂಯೋಜಕರುಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ದೀಪಿಕಾ ಜಿ, ಶ್ರೀಮತಿ ನಿರ್ಮಲ ಬಿಲ್ಲವ ಉಪಸ್ಥಿತರಿದ್ದರು. ಅಂತಿಮ ವರ್ಷ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮವನ್ನು ನಿರೂಪಿಸಿದರು.





















































































































