
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ “ಪುತ್ತೂರು ದೀಪೋತ್ಸವ -2026 ‘ ಕಾರ್ಯಕ್ರಮದ ಲೋಗೋ ಮತ್ತು ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 26 ರಂದು ನಡೆಯಿತು. ದೀಪೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಅವರು ಅಧ್ಯಕ್ಷತೆ ವಹಿಸಿದ್ದು, ಖ್ಯಾತ ಎಲುಬು ತಜ್ಞ ಡಾ. ಅಜಯ್ ಅವರು ಲೋಗೋ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್, ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.





















































































































