ಬಂಟರ ಯಾನೆ ನಾಡವರ ಸಂಘ (ರಿ) ಬೈಂದೂರು ಇವರ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ಅವರು ಬಂಟ ಸಮುದಾಯಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ ಸಾಧಕ ಸೇವಾ ವಂದನಾ ಸಮರ್ಪಣ ಪ್ರಧಾನ ಅಕ್ಟೋಬರ್ 24ರ ಶನಿವಾರ ಬೆಳಿಗ್ಗೆ 10.00 ಗಂಟೆಗೆ ಬೈಂದೂರು ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ.ಜೆ ಸಭಾಭವನದಲ್ಲಿ ನಗು ಗ್ರೂಪ್ ನ ಆಡಳಿತ ನಿರ್ದೇಶಕ ಕುಶಲ್ ಶೆಟ್ಟಿ ನಾವುಂದ ಪ್ರಧಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗೋಕುಲ್ ಜಿ ಶೆಟ್ಟಿ ವಹಿಸಿದ್ದರು.




ಹಿರಿಯ ಉದ್ಯಮಿ ಘಟಪ್ರಭಾ ಜಯಶೀಲ ಎನ್ ಶೆಟ್ಟಿ, ನ್ಯೂ ಮೆಡಿಕಲ್ ಸೆಂಟರ್ ನ ಆಡಳಿತ ನಿರ್ದೇಶಕ ಡಾ. ರಂಜನ್ ಶೆಟ್ಟಿ, ಲಯನ್ ಜಿಲ್ಲಾ ಉಪ ಗವರ್ನರ್ ಹರಿಪ್ರಸಾದ್ ರೈ, ಕುಂದಾಪುರ ಯುವ ಬಂಟರ ಸಂಘದ ಗೌರವಾಧ್ಯಕ್ಷ ಶೇರ್ಡಿ ಗೈನಾಡಿಮನೆ ಪ್ರಕಾಶ್ ಶೆಟ್ಟಿ, ಬೈಂದೂರು ಬಂಟರ ಸಂಘದ ಗೌರವಾಧ್ಯಕ್ಷರಾದ ಚಿತ್ತೂರು ಮಂಜಯ್ಯ ಶೆಟ್ಟಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ವಿಶ್ರಾಂತ ಸಹಾಯಕ ಮಹಾ ಪ್ರಬಂಧಕ ಶೇಖರ್ ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಭಾಪತಿ ಸಿಎ ಶಾಂತರಾಮ ಶೆಟ್ಟಿ, ಭಾಗವತ ಸುರೇಶ್ ಶೆಟ್ಟಿ ಶಂಕರನಾರಾಯಣ, ವಿದ್ಯಾರ್ಥಿ ವೇತನ ಸಮಿತಿ ಸಂಚಾಲಕ ಭಾಸ್ಕರ್ ಶೆಟ್ಟಿ ನಾವುಂದ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಹಳಗೇರಿ, ಕೋಶಾಧಿಕಾರಿ ಜಿ ಶಂಕರ ಶೆಟ್ಟಿ ಕೆಳ ಗಾಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


















































































































