ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ರಕ್ತನಿಧಿ ಕೇಂದ್ರದ ಸಿಬ್ಬಂದಿಗಳಾದ ಸುಜಯ ಹಾಗೂ ವೀರೇಂದ್ರ ಅವರು ವಿವರವಾದ ಮಾಹಿತಿ ನೀಡಿದರು. ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿ ಜಯಕರ್ ಶೆಟ್ಟಿ, ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಖಜಾಂಚಿ ಶಿವರಾಮ ಶೆಟ್ಟಿ, ಸದಸ್ಯರಾದ ಗಣೇಶ್ ಆಚಾರ್, ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಯೋಗೀಶ್ ಶ್ಯಾನುಭೋಗ್ ಹಾಗೂ ಶ್ರೀಮತಿ ಪ್ರಥ್ವಿಶ್ರೀ ಜಿ ಶೆಟ್ಟಿ ಉಪಸ್ಥಿತರಿದ್ದರು.





















































































































