ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಸದಿಲ್ಲಿಯಲ್ಲಿ ಉಡುಪಿಯ ಯುವ ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ ಅವರು ಸೌಹಾರ್ದ ಭೇಟಿ ಮಾಡಿ ಉಡುಪಿ ಶ್ರೀ ಕೃಷ್ಣನ ವಿಗ್ರಹವನ್ನು ಸ್ಮರಣಿಕೆಯಾಗಿ ಸಮರ್ಪಿಸಿದರು. ಈ ವೇಳೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಉಡುಪಿ ಹಾಗೂ ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರನ್ನು ಸ್ಮರಿಸಿ, ರಾಷ್ಟ್ರ ಮತ್ತು ಧರ್ಮದ ಸೇವೆಯಲ್ಲಿ ಶ್ರೀಗಳ ಕೊಡುಗೆಯನ್ನು ನೆನಪಿಸಿಕೊಂಡರು. ಈ ವೇಳೆ ದೇಶದ ಭದ್ರತೆ, ನಕ್ಸಲ್ ಮುಕ್ತ ಭಾರತ ಅಭಿಯಾನ, ಸಿ.ಆರ್.ಪಿ.ಎಫ್ ನ ಕಾರ್ಯಾಚರಣ ಸಾಧನೆ ಹಾಗೂ ನಶಾಮುಕ್ತ ಭಾರತ ಅಭಿಯಾನದ ಕುರಿತು ಅಜಯ್ ಪಿ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿ ಅವರ ಕಾರ್ಯವನ್ನು ಶ್ಲಾಘಸಿದರು.





















































































































