ಕರಾವಳಿಯ ಜನಪ್ರಿಯ ಶೆಫ್ ಹಾಗೂ ಬಹುಮುಖ ಪ್ರತಿಭೆಯ ಕಲಾವಿದರಾಗಿ ಗುರುತಿಸಿಕೊಂಡಿರುವ ತೋಡಾರ್ ಮೂಲದ ಪ್ರಶಾಂತ್ ಎಂ ಶೆಟ್ಟಿ ಅವರು ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಪ್ರದಾನ ಮಾಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ‘ಕರುನಾಡ ರತ್ನ’ ಪ್ರಶಸ್ತಿ ಹಾಗೂ ಬಿರುದಿಗೆ ಆಯ್ಕೆಯಾಗಿದ್ದಾರೆ. ಅಡುಗೆ ಕಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರಶಾಂತ್ ಎಂ ಎಸ್ ಅವರು ಕೇವಲ ಶೆಫ್ ಆಗಿ ಮಾತ್ರವಲ್ಲದೆ, ವಿವಿಧ ಕಲಾ ಕ್ಷೇತ್ರಗಳಲ್ಲಿಯೂ ಆಸಕ್ತಿ ಮತ್ತು ಪ್ರತಿಭೆಯನ್ನು ಹೊಂದಿರುವ ಬಹುಮುಖ ವ್ಯಕ್ತಿತ್ವದವರಾಗಿದ್ದಾರೆ. ತಮ್ಮ ವೃತ್ತಿಪರ ಕೌಶಲ್ಯ, ಸೃಜನಶೀಲತೆ ಹಾಗೂ ಕಲಾತ್ಮಕ ಅಭಿರುಚಿಯ ಮೂಲಕ ಕರಾವಳಿ ಭಾಗದಲ್ಲಿ ಜನಪ್ರಿಯತೆ ಗಳಿಸಿರುವುದು ಅವರ ವಿಶೇಷತೆಯಾಗಿದೆ. ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಕನ್ನಡ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕರುನಾಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಪ್ರತಿಭೆ ಮತ್ತು ಪರಿಶ್ರಮಕ್ಕೆ ಸೂಕ್ತ ಗೌರವ ದೊರೆತಾಗ ಅದು ವ್ಯಕ್ತಿಯ ಸಾಧನೆಗೆ ಮತ್ತಷ್ಟು ಪ್ರೇರಣೆಯಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಸಾಧನೆಯ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ. ನವೆಂಬರ್ 29, 2026ರ ಭಾನುವಾರ ಬೆಂಗಳೂರಿನ ಟೌನ್ ಹಾಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಾಂತ್ ಎಂ.ಎಸ್ ಅವರಿಗೆ ‘ಕರುನಾಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವ ಕರಾವಳಿಯ ಪ್ರತಿಭೆ ಪ್ರಶಾಂತ್ ಎಂ.ಎಸ್ ತೋಡಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಲಯದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಗ್ರಂಥಾಲಯ ಸಂಘದ ಜಂಟಿ ಕಾರ್ಯದರ್ಶಿ ದಿನೇಶ್ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಶೆಟ್ಟಿ ಫ್ಯಾಮಿಲಿ ವತಿಯಿಂದಲೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ. ಪ್ರಶಾಂತ್ ಅವರ ಕಲಾ ಪಯಣ ಹಾಗೂ ವೃತ್ತಿಜೀವನ ಮತ್ತಷ್ಟು ಯಶಸ್ಸಿನೊಂದಿಗೆ ಮುಂದುವರಿಯಲಿ ಎಂದು ಅವರು ಹಾರೈಸಿದ್ದಾರೆ.





















































































































