ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರ ಕುಂದಾಪುರ, ಎನ್ಎಸ್ಎಸ್ ಘಟಕಗಳು ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕುಂದಾಪುರದ ಬಂಟರ ಯಾನೆ ನಾಡವರ ಸಂಕೀರ್ಣದ ಎಸ್.ಎಸ್ ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಕುಂದಾಪುರ ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಚಿತ್ತರಂಜನ್ ಹೆಗ್ಡೆ ಹರ್ಕೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆಯಾಗಿದ್ದು, ಒಂದು ಜೀವ ಉಳಿಸುವ ಮೂಲಕ ಮತ್ತೊಂದು ಕುಟುಂಬಕ್ಕೆ ಹೊಸ ಭರವಸೆ ನೀಡಿದಂತಾಗುತ್ತದೆ. ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಔಷಧಿಯನ್ನು ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ ಎಂದರು.




ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ ಉಮೇಶ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ, ಸಂಘದ ಪೋಷಕರಾದ ರಾಘವ ಶೆಟ್ಟಿ ಕೊಡ್ಲಾಡಿ, ಲಯನ್ಸ್ ಕ್ಲಬ್ ಕೋಸ್ಟಲ್ ಅಧ್ಯಕ್ಷ ಗಣೇಶ್ ಬೈಂದೂರು, ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಸಂಘದ ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ಸುಕೇಶ್ ಶೆಟ್ಟಿ ಹೊಸಮಠ, ನಿತೇಶ್ ಶೆಟ್ಟಿ ಬಸ್ರೂರು, ಕಾರ್ಯಕ್ರಮ ಸಂಚಾಲಕ ರಾಜೇಶ್ ಶೆಟ್ಟಿ ವಕ್ವಾಡಿ, ಎನ್ಎಸ್ಎಸ್ ಅಧಿಕಾರಿ ಪೂಜಾ ಕುಂದರ್ ಉಪಸ್ಥಿತರಿದ್ದರು. ಸಂಘದ ಸದಸ್ಯ ರಾಜೀವ ಶೆಟ್ಟಿ ನಿಡೂಟಿ ಸ್ವಾಗತಿಸಿ, ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಹರ್ಕೂರು ವಂದಿಸಿ, ಅಭಿಷೇಕ್ ಕುಲಾಲ್ ಪ್ರಾರ್ಥಿಸಿ, ಕೋಶಾಧಿಕಾರಿ ಅರುಣ್ ಶೆಟ್ಟಿ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.


















































































































