ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾಗಿ ಸದಾಶಿವ ಶೆಟ್ಟಿಯವರು ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ತಮ್ಮ ಜವಾಬ್ದಾರಿಯನ್ನು ಸುರೇಂದ್ರ ಶೆಟ್ಟಿಯವರಿಗೆ ಹಸ್ತಾಂತರಿಸಿದ್ದಾರೆ. ಹಿಂದೆ ಸೀತಾರಾಮ ಶೆಟ್ಟಿಯವರು ದೇವಸ್ಥಾನದ ಅನುವಂಶಿಕ ಮೊಕ್ತೇಸರರಾಗಿದ್ದರು. ಅವರ ನಿಧನದ ನಂತರ ಸದಾಶಿವ ಶೆಟ್ಟಿಯವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇದೀಗ ಸದಾಶಿವ ಶೆಟ್ಟಿಯರ ಮೊಕ್ತೇಸರ ಜವಾಬ್ದಾರಿಯನ್ನು ಸುರೇಂದ್ರ ಶೆಟ್ಟಿಯವರಿಗೆ ಹಸ್ತಾಂತರಿಸಲಾಗಿದೆ. ಸುರೇಂದ್ರ ಶೆಟ್ಟಿಯವರು ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿದ್ದಾರೆ. ಮಾರಣಕಟ್ಟೆ ಕ್ಷೇತ್ರದ ಧಾರ್ಮಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿಯನ್ನು ಇನ್ನು ಮುಂದೆ ಸುರೇಂದ್ರ ಶೆಟ್ಟಿಯವರು ನಿರ್ವಹಿಸಲಿದ್ದಾರೆ.






















































































































