ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ತುಳು ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಡಾ| ಆರ್ ಧನರಾಜ್ ಅವರನ್ನು ಮಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸನ್ಮಾನಿಸಲಾಯಿತು. ಜೆಡಿಎಸ್ ರಾಜ್ಯ ವಕ್ತಾರ ಹಾಗೂ ಉಪಾಧ್ಯಕ್ಷ ಎಂಬಿ ಸದಾಶಿವ, ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಕಾರ್ಯಾಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಶೆಟ್ಟಿ ಜೆಪ್ಪು, ಮಾಜಿ ಕಾರ್ಪೋರೇಟರ್ ಅಝೀಝ್, ವಿನ್ಸೆಂಟ್ ಪಿರೇರಾ, ತುಳಸೀದಾಸ್, ರತ್ನಾಕರ ಸುವರ್ಣ, ವಸಂತ ಪೂಜಾರಿ, ರಮೀಜ ನಾಸಿರ್, ಸುಮತಿ ಹೆಗ್ಡೆ ಉಪಸ್ಥಿತರಿದ್ದರು.





















































































































