ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ತಾಲೂಕು ಸಮಿತಿಯ ಇದರ ಆಶ್ರಯದಲ್ಲಿ ಗ್ರಾಮ ಪ್ರತಿನಿಧಿ ಸಮ್ಮೇಳನ ಮತ್ತು ಎಜುಕೇಷನಲ್ ಎಕ್ಸಲೆನ್ಸ್ ಅವಾರ್ಡ್ ಸಮಾರಂಭವು ನವೆಂಬರ್ 22 ರಂದು ಭಾನುವಾರ ಮಂಗಳೂರು ಪುರಭವನದಲ್ಲಿ ಬೆಳಿಗ್ಗೆ ಗಂಟೆ 9-30 ರಿಂದ ನಡೆಯಲಿದೆ ಎಂದು ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತುರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ವಹಿಸಿಕೊಳ್ಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಿದ್ದಾರೆ.




ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ ಜಯಪ್ರಕಾಶ್ ಹೆಗ್ಡೆಯವರು ಗ್ರಾಮ ಪ್ರತಿನಿಧಿಗಳ ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಿದ್ದಾರೆ. ಆಳ್ವಾಸ್ ಎಜುಕೇಷನಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಇವರು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ 95% ಅಂಕಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಜುಕೇಷನಲ್ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಿದ್ದಾರೆ. ಮಂಗಳೂರು ತಾಲೂಕು ಸಮಿತಿ ಉಪ ಸಂಚಾಲಕ ಅಶ್ವತ್ಥಾಮ್ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಉಲ್ಲಾಸ್ ಆರ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


















































































































