ಕುಂದಾಪುರ ಭಾಗದಲ್ಲಿ ಉತ್ತಮ ಗುಣಮಟ್ಟದ,ಮೌಲ್ಯಯುತ ಶಿಕ್ಷಣ ನೀಡುತ್ತಿರುವ, 50 ವರ್ಷ ಪೂರೈಸಿರುವ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಯ 2027-31ರ ಅವಧಿಗೆ ಅಧ್ಯಕ್ಷರಾಗಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ನಡೆದ ಸಭೆಯಲ್ಲಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಡಾ. ವೈ.ಎಸ್ ಹೆಗ್ಡೆ, ಕಾರ್ಯದರ್ಶಿಯಾಗಿ ಸೀತಾರಾಮ ನಕ್ಕತ್ತಾಯ, ಜಂಟಿ ಕಾರ್ಯದರ್ಶಿಯಾಗಿ ಕೆ ಸುಧಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಡಾ. ಎಂ. ಸಚ್ಚಿದಾನಂದ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಸದಸ್ಯರಾಗಿ ಬಿ. ಅರುಣ್ ಕುಮಾರ್ ಶೆಟ್ಟಿ, ಡಾ. ಸಂತೋಷ್ ಕುಮಾರ್ ಶೆಟ್ಟಿ ಎಂ ಪುನರಾಯ್ಕೆಯಾದರೆ, ಸತ್ಯಮೋಹನ್ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಡಾ. ಶಿಶಿರ್ ಶೆಟ್ಟಿ ಮೊದಲ ಬಾರಿ ಆಯ್ಕೆಯಾಗಿದ್ದಾರೆ. ಬಿ.ಎಂ ಸುಕುಮಾರ್ ಶೆಟ್ಟಿಯವರು ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಮುಂದಿನ ವರ್ಷ 25ನೇ ವರ್ಷ ಪೂರೈಸಲಿದ್ದಾರೆ. ಪ್ರಸ್ತುತ ಶಿಕ್ಷಣ ಸಂಸ್ಥೆಗಳಲ್ಲಿ 5 ಸಾವಿರಕ್ಕೂ ಮಿಕ್ಕಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.





















































































































