ಸಹಕಾರಿ ವ್ಯವಸಾಯಿಕ ಸಂಘ ನಿ. ಶಿರ್ವ ಇಲ್ಲಿಯ ಪ್ರಧಾನ ಕಛೇರಿಯ ಆವರಣದಲ್ಲಿ ನೂತನ ಗೋದಾಮು ಹಾಗೂ ಬಹು ಸೇವಾ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು 21.02.2022 ರಂದು ಜರಗಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕುತ್ಯಾರು ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಜರಗಿತು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಸಮಾಜ ಸೇವಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, DCC ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಜೇಶ್ ರಾವ್, ಸಹಕಾರ ಸಂಘಗಳ ಸಹಾಯಕ ನಿಭಂದಕರಾದ ಶ್ರೀ ಅರುಣ್ ಕುಮಾರ್, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ರಾಮರಾಯ ಪಾಟ್ಕರ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲತಾ ಎಸ್ ಆಚಾರ್ಯ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯೋಗಿನಿ ಶೆಟ್ಟಿಯವರು ಉಪಸ್ಥಿತರಿದ್ದರು. ಧಾರ್ಮಿಕ ಕಾರ್ಯಕ್ರಮವನ್ನು ವೇದ ಮೂರ್ತಿ ಶ್ರೀನಿವಾಸ ಭಟ್ ಶಿರ್ವ ಅವರು ನೆರವೇರಿಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀಮತಿ ವಾರಿಜ ಪೂಜಾರ್ತಿಯವರು ಸ್ವಾಗತಿಸಿದರು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ರವೀಂದ್ರ ಆಚಾರ್ಯರವರು ವಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯವ್ಯಾಪ್ತಿಯ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು, ಕಟಪಾಡಿ CA ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ ಹಾಗೂ ನಿರ್ದೇಶಕರಾದ ಮುರಳೀಧರ್ ಪೈ, ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಶಶಿಧರ್ ವಾಗ್ಳೆ, ಶ್ರೀ ದೇವದಾಸ್ ನಾಯಕ್ ಶಿರ್ವ, ಶ್ರೀ ಜಿನೇಶ್ ಬಲ್ಲಾಳ್ ಕುತ್ಯಾರು ಅರಮನೆ, ಸುಂದರ ಪ್ರಭು, ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ದಿನೇಶ್ ಸುವರ್ಣ ಹಾಗೂ ಇಗ್ನೇಷಿಯಸ್ ಡಿಸೋಜಾ ಮತ್ತು ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.