ಕಾರ್ಕಳದಲ್ಲಿ ನಡೆದ ಕ್ರೀಡಾಕೂಟದಲ್ಲಿ ಮೂಡಬಿದಿರೆ ವಲಯದ ಯುವ ಬಂಟರು ಅತೀ ಹೆಚ್ಚು ಪ್ರಶಸ್ತಿಗಳನ್ನು ಗೆಲ್ಲುವುದರ ಮೂಲಕ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕಾರ್ಕಳ ಯುವ ಬಂಟರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ಮೂಡಬಿದಿರೆ ಯುವ ಬಂಟರ ಸಂಘವು ವಾಲಿಬಾಲ್ – ಪ್ರಥಮ, ತ್ರೋ ಬಾಲ್ – ಪ್ರಥಮ, ನೃತ್ಯ ಸ್ಪರ್ಧೆ – ತೃತೀಯ ಸ್ಥಾನವನ್ನು ಪಡೆದುಕೊಂಡು ಬಂಟ ಸಮಾಜದ ಪ್ರಶಂಸೆಗೆ ಪಾತ್ರವಾಯಿತು. ಯುವ ಬಂಟರ ಸಂಘದ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಗೌರವ ಸಲಹೆಗಾರರಾದ ಮನೋಜ್ ಕುಮಾರ್ ಶೆಟ್ಟಿ, ಅರುಣ್ ಶೆಟ್ಟಿ, ಪ್ರ ಕಾರ್ಯದರ್ಶಿ ಸಂದೀಪ್ ಶೆಟ್ಟಿ, ಉಪಾಧ್ಯಕ್ಷರಾದ ರಮೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಶೃತಿ ಶೆಟ್ಟಿ, ಆದರ್ಶ್ ಶೆಟ್ಟಿ, ಸುಧೀರ್ ಶೆಟ್ಟಿ, ದೀಪಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.