ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಮಾಚ್೯ 7 ರಂದು ಸೋಮವಾರ ಮಧ್ಯಾಹ್ನ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ. ಈ
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ವಹಿಸಲಿದ್ದಾರೆ.
ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಚೆಕ್ ಗಳನ್ನು ವಿತರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಎನ್. ಶಶಿ ಕುಮಾರ್, ಗೌರವಾನ್ವಿತ ಅತಿಥಿಯಾಗಿ ಮುಂಬಯಿ ವಿ.ಕೆ.ಗ್ರೂಪ್ ನ ಚೆಯರ್ ಮೆನ್ ಕೆ.ಎಂ. ಶೆಟ್ಟಿ ಮಧ್ಯಗುತ್ತು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ, ರಾಷ್ಟ್ರಪತಿಗಳ ಸೇವಾ ಪದಕ ಪುರಸ್ಕೃತ ವಿಜಯ ಕಾಂಚನ್ ಬೈಕಂಪಾಡಿ, ಸಂಸ್ಕಾರ ಭಾರತಿ ಮಂಗಳೂರು ಇದರ ಅಧ್ಯಕ್ಷ ಕೆ ಪುರುಷೋತ್ತಮ ಭಂಡಾರಿ ಅಡ್ಯಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಹಿರಿಯ ಪತ್ರಕರ್ತರಾದ ಕೆ. ಆನಂದ ಶೆಟ್ಟಿ, ಪಿ.ಬಿ.ಹರೀಶ್ ರೈ,
ಕರ್ನಾಟಕ ಅರಣ್ಯ ಸಂರಕ್ಷಣ ಅಧಿಕಾರಿ (ಎಸಿಎಫ್) ಹಸ್ತಾ ಶೆಟ್ಟಿ, ಪಿಎಚ್ ಡಿ ಪದವಿ ಪಡೆದ ಡಾ.ಪ್ರಿಯಾ ಹರೀಶ್ ಶೆಟ್ಟಿ, ಡಾ.ಮಂಜುಳಾ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್ ಉಪಸ್ಥಿತರಿರುವರು. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳುಕೂಡಾ ಭಾಗವಹಿಸಲಿದ್ದಾರೆ.
Next Article ಸಮಾಜಸೇವಕ ನ್ಯಾಯವಾದಿ ಆರ್ ಜಿ ಶೆಟ್ಟಿ