ಸಹಕಾರಿ ಸಂಘಗಳ ಕ್ಷೇತ್ರದ ಧುರೀಣ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರ ಹುಟ್ಟು ಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ಅವರು ಭಾಗವಹಿಸಿ ಶ್ರೀ ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದರು. ಐಕಳ ಹರೀಶ್ ಶೆಟ್ಟಿಯವರ ಸಮಾಜಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನೆರವು ನೀಡಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಶ್ರೀ ಇಂದ್ರಾಳಿ ಜಯಕರ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉಡುಪಿಯ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷರಾದ ನಾಡೋಜ ಡಾ. ಜಿ ಶಂಕರ್, ಮೀನುಗಾರಿಕಾ ಮಹಾಮಂಡಲದ ಶ್ರೀ ಯಷ್ಪಾಲ್ ಸುವರ್ಣ, ಖ್ಯಾತ ಪತ್ರಕರ್ತ ಶ್ರೀ ಮನೋಹರ ಪ್ರಸಾದ್ ಅವರುಗಳು ಉಪಸ್ಥಿತರಿದ್ದರು. For more Kannada News refer Karnataka Times
Previous Articleಸಮಾಜಸೇವಕ ನ್ಯಾಯವಾದಿ ಆರ್ ಜಿ ಶೆಟ್ಟಿ
Next Article ಪೊವಾಯಿ ಕನ್ನಡ ಸೇವಾ ಸಂಘದಿಂದ ಆಶ್ರಮಕ್ಕೆ ಭೇಟಿ