ಇನ್ನಾ ಬಂಟರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ಮೂಡಬಿದಿರೆ ಯುವ ಬಂಟರ ಸಂಘದ ಮಹಿಳೆಯರ ತ್ರೋಬಾಲ್ ಹಾಗೂ ಪುರುಷರ ವಾಲಿಬಾಲ್ ತಂಡವು ಭಾಗವಹಿಸಿ, ವಾಲಿಬಾಲ್ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಕ್ರೀಡಾಕೂಟದಲ್ಲಿ ಮೂಡಬಿದರೆ ಯುವ ಬಂಟರ ಸಂಘದ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿ, ಗೌರವ ಸಲಹೆಗಾರರಾದ ಮನೋಜ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಡಾ. ವಿನಯ್ ಆಳ್ವ, ಉಪಾಧ್ಯಕ್ಷರಾದ ಭರತ್ ಶೆಟ್ಟಿ, ರಮೇಶ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾದ ಆದರ್ಶ ಶೆಟ್ಟಿ, ಸುಕುಮಾರ್ ಶೆಟ್ಟಿ, ಅತಿಥ್ ಶೆಟ್ಟಿ, ದೀಪಕ್ ಶೆಟ್ಟಿ, ಸುಕೇಶ್ ಶೆಟ್ಟಿ ಕೇಮಾರು, ರಾಜೇಶ್ ಶೆಟ್ಟಿ, ನವೀನ್ ಶೆಟ್ಟಿ ಉಪಸ್ಥಿತರಿದ್ದರು.