ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತಿದಿನ ಸಂಜೆ ರೋಗಿಗಳ ಜೊತೆಗಾರರಿಗೆ ಊಟ ನೀಡುವ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಪ್ರತೀ ವರ್ಷ ಒಂದು ತಿಂಗಳ 2,25,000 ರೂ. ದೇಣಿಗೆ ನೀಡುತ್ತಿದ್ದು, 2021ನೇ ಸಾಲಿನ ದೇಣಿಗೆಯ ಎರಡನೇ ಕಂತಿನ 1,75,000/- ರೂ. ಮೊತ್ತದ ಚೆಕ್ಕನ್ನು ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಸಮಾರಂಭದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹಸ್ತಾಂತರಿಸಿದರು. ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಆರ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಮುಂಬೈ ಉದ್ಯಮಿಗಳಾದ ಕರುಣಾಕರ್ ಶೆಟ್ಟಿ ಮಧ್ಯಗುತ್ತು, ಆದರ್ಶ್ ಶೆಟ್ಟಿ, ಅಶೋಕ್ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ, ಇಂದ್ರಾಳಿ ಜಯಕರ್ ಶೆಟ್ಟಿ ಮತ್ತು ಗಣ್ಯರು ಉಪಸ್ಥಿತರಿದ್ದರು. ಮೊಹಮ್ಮದ್ ಆರಿಫ್ ಮತ್ತು ಹಮೀದ್ ಅತ್ತೂರು ಚೆಕ್ ಸ್ವೀಕರಿಸಿದರು.