ನಿವೃತ್ತ ಶಿಕ್ಷಕಿ ಪುಷ್ಪಲತಾ ಬಾಲಕೃಷ್ಣ ಶೆಟ್ಟಿ ಅವರಿಗೆ ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಸುರತ್ಕಲ್ ವಲಯ ಸಂಘಟನೆಯ ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಪುಷ್ಪಲತಾ ಶೆಟ್ಟಿ ಅವರು ಮಹಿಳಾ ವೇದಿಕೆಯ ಮಾಜೀ ಕಾರ್ಯದರ್ಶಿಯಾಗಿ ದುಡಿದಿದ್ದರು. ಮಹಿಳಾ ವೇದಿಕೆ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಮಹಿಳಾ ವೇದಿಕೆಯನ್ನು ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇವರ ಹಿರಿತನ ಮತ್ತು ಮಹಿಳಾ ವೇದಿಕೆಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಅವರನ್ನು ಮಹಿಳಾ ವೇದಿಕೆಯಿಂದ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಪುಷ್ಪಲತಾ ಶೆಟ್ಟಿ ಅವರು ಮಾತನಾಡಿ ಮಹಿಳಾ ವೇದಿಕೆ ಇಂದು ಸಂಘಟನಾತ್ಮಕವಾಗಿ ಬೆಳೆದಿದೆ. ಮಹಿಳೆಯರ ಒಗ್ಗಟ್ಟು ಇದೇ ರೀತಿ ಮುಂದುವರಿಯಲಿ. ಸಂಘದ ಬೆಳವಣಿಗೆಗೆ ಮಹಿಳಾ ವೇದಿಕೆ ಸಹಕಾರಿಯಾಗಿ ಕೆಲಸ ಮಾಡಲಿ ಎಂದರು.
ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ ಸಂಘ ಮತ್ತು ಸಂಘಟನೆ ವಿಚಾರದಲ್ಲಿ ಕಾರ್ಯಾಗಾರ ನಡೆಸಿದರು.
ಸಭೆಯ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಚಿತ್ರಾ ಜೆ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಭಾರತಿ ಜಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಕೇಸರಿ ಎಸ್ ಪೂಂಜ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ ಶೆಟ್ಟಿ ಹಾಗೂ ಮಾಜೀ ಅಧ್ಯೆಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿರ್ದೇಶಕಿ ಭುವನೇಶ್ವರಿ ಶೆಟ್ಟಿ ಸಭೆಯಲ್ಲಿ ಅಭಿಪ್ರಾಯ ವ್ಕಕ್ತಪಡಿಸಿದರು.
ರೇಖಾ ಶೆಟ್ಟಿ, ಮಾಲತಿ ಶೆಟ್ಟಿ ಪ್ರಾರ್ಥನೆಗೈದರು. ಸೌಮ್ಯ ಆರ್ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ದಯಾಮಣಿ ಶೆಟ್ಟಿ ವಂದಿಸಿದರು. ಸುರತ್ಕಲ್ ಗ್ರಾಮದ ವಲಯ ಸಂಘಟಕಿ ಜ್ಯೋತಿ ಜೆ ಶೆಟ್ಟಿ ಸಭೆಯನ್ನು ಸಂಘಟಿಸಿದ್ದರು. ಸೌಮ್ಯ ಶರತ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.