ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಬಂಟ ಸಮಾಜದ ದೈವದ ಮುಕ್ಕಾಲ್ದಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಮೇ 3 ರಂದು ಮಂಗಳವಾರ ಮಧ್ಯಾಹ್ನ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಶಿಕ್ಷಣ, ಮದುವೆ, ಮನೆ ನಿರ್ಮಾಣ, ಕ್ರೀಡೆ, ವೈದ್ಯಕೀಯ ಮೊದಲಾದ ಫಲಾನುಭವಿಗಳಿಗೆ ಚೆಕ್ ಗಳನ್ನು ವಿತರಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಅಧ್ಯಕ್ಷ, ಒಕ್ಕೂಟದ ನಿರ್ದೇಶಕ ಸದಾಶಿವ ಶೆಟ್ಟಿ ಕುಳೂರು-ಕನ್ಯಾನ, ಮಾಜೀ ಸಚಿವ ಬಿ ನಾಗರಾಜ ಶೆಟ್ಟಿ, ಒಕ್ಕೂಟದ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ, ಹುಬ್ಬಳ್ಳಿ ಪಂಜುರ್ಲಿ ಗ್ರೂಪ್ ನ ಅಧ್ಯಕ್ಷ ರಾಜೇಂದ್ರ ಶೆಟ್ಟಿ ಹುಬ್ಬಳ್ಳಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್ ಉಪಸ್ಥಿತರಿರುವರು. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.