ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ಶೇಕಡಾ 95 ಕ್ಕೂ ಮಿಕ್ಕಿ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಂತೋಷ್ ಶೆಟ್ಟಿ ಬೋಳ, ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ರವಿ ಶೆಟ್ಟಿ ಜತ್ತಬೆಟ್ಟು, ಇತರ ಸಂಘಗಳ ಪದಾಧಿಕಾರಿಗಳು, ಪಲಾನುಭವಿಗಳ ಕುಟುಂಬಸ್ಥರು, ಒಕ್ಕೂಟದ ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
