ಜನನ-ಮರಣ ನೋಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಉಪವಿಭಾಗಾಧಿಕಾರಿ ಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ರಾಜ್ಯ ಸರಕಾರದ “ಅಧಿಸೂಚನೆ” ಯ ವಿರುದ್ದ ಕುಂದಾಪುರ ಬಾರ್ ಅಸೋಸಿಯೇಷನ್ ನ ಎದುರುಗಡೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆಯವರ ನೇತೃತ್ವದಲ್ಲಿ “ಪ್ರತಿಭಟನೆ” ಮಾಡಲಾಯಿತು.
ಈ “ಪ್ರತಿಭಟನೆ” ಯಲ್ಲಿ ವಕೀಲರ ಸಂಘದ ಹಿರಿಯ-ಕಿರಿಯ-ಮಹಿಳಾ ವಕೀಲರು ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವೀ ಗೊಳಿಸಿದರು.
ಈ ಸಂದರ್ಭ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಶ್ರೀಮತಿ ಬೀನಾ ಜೊಸೆಫ್, ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಮತ್ತು ಜತೆ ಕಾರ್ಯದರ್ಶಿ ರಿತೇಶ್ ಬಿ. ಉಪಸ್ಥಿತರಿದ್ದರು.