ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಉಪಕ್ರಮದ ಅನ್ವಯ ನಗರದ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಭವನ ನಿರ್ಮಾಣ ಕಾಮಗಾರಿಗೆ 10 ಲಕ್ಷ ರೂ. ಗಳ ನೆರವು ನೀಡಲಾಗಿದೆ.


ನಗರದ ಜಿಲ್ಲಾ ಪಂಚಾಯತ್ನ ಮಿನಿ ಸಭಾಂಗಣದಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಎಚಿಡಿ ಹಾಗೂ ಸಿಇಒ ಅಟನ್ ಕುಮಾರ್ ದಾಸ್ ಅವರು ಭಾರತೀಯ ರೆಡ್ ಕ್ರಾಸ್ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಸಿಇಒ ಡಾ| ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಡಾ| ಕುಮಾರ್ ಅವರು, ಬ್ಯಾಂಕ್ ಆಫ್ ಇಂಡಿಯಾದಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ಅತ್ಯಂತ ಸೂಕ್ತ ಸಮಯದಲ್ಲಿ ಆರ್ಥಿಕ ಸಹಕಾರ ನೀಡುತ್ತಿರುವುದು ಸ್ವಾಗತಾರ್ಹ, ಇದರಿಂದ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿ, ಇದು ಇತರ ಬ್ಯಾಂಕುಗಳಿಗೂ ಮಾದರಿಯಾಗಲಿದೆ ಎಂದರು.

ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ವಿವೇಕಾನಂದ ದುಬೆ, ವಲಯ ಮ್ಯಾನೇಜರ್ ಎಂ.ಪಿ.ಸುರೇಶ್, ರೆಡ್ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ.ಕೆ. ಕುಸುಮಾಧರ್, ವೈಸ್ ಚೇರ್ಮನ್ ಡಾ| ಸತೀಶ್ ರಾವ್, ಖಜಾಂಚಿ ಮೋಹನ್ ಶೆಟ್ಟಿ ಕೆ., ನಿರ್ದೇಶಕರಾದ ಡಾ| ಸಚ್ಚಿದಾನಂದ ರೈ, ಗುರುದತ್ತ ಎಂ. ನಾಯಕ್, ಪಿ.ಬಿ. ಹರಿಪ್ರಸಾದ್ ರೈ ಉಪಸ್ಥಿತರಿದ್ದರು. ಡಾ| ಸುಮನಾ ಬಿ. ಕಾರ್ಯಕ್ರಮ ನಿರೂಪಿಸಿದರು.











































































































