ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಪ್ರಾಯೋಜಕತ್ವದಲ್ಲಿ ಪುಣೆ ಬಂಟರ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಭವನದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಕಾಪು ರಂಗತರಂಗ ಕಲಾವಿದರಿಂದ ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾರಥ್ಯದ ಪ್ರಸನ್ನ ಶೆಟ್ಟಿ ಬೈಲೂರು ರಚಿಸಿರುವ ಶರತ್ ಉಚ್ಚಿಲ ನಿರ್ದೇಶನದಲ್ಲಿ ತುಳು ಸಾಂಸಾರಿಕ ಹಾಸ್ಯಮಯ ನಾಟಕ “ಅಧ್ಯಕ್ಷೆರ್ ” ತುಂಬಿದ ಸಭಾಗೃಹದಲ್ಲಿ ಯಶಸ್ವಿ ಪ್ರದರ್ಶನಗೊಂಡಿತು. ನಾಟಕ ಪ್ರದರ್ಶನದ ಮಧ್ಯಂತರದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆದಿದ್ದು ಹೋಟೆಲ್ ಉದ್ಯಮಿ, ಕಲಾಪೋಷಕ ಪುಣೆ ಬಂಟರ ಸಂಘದ ವಿಶ್ವಸ್ತರಾದ ಪಾದೂರು ಹೊಸಮನೆ ಮಾಧವ ಆರ್ ಶೆಟ್ಟಿ ಹಾಗೂ ಪುಷ್ಪ ಎಂ ಶೆಟ್ಟಿ ದಂಪತಿಗಳನ್ನು ಸಮಾಜಕ್ಕೆ ಸಲ್ಲಿಸುವ ವಿಶೇಷ ಸೇವೆಗಾಗಿ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ವತಿಯಿಂದ ಶಾಲು ಹೊದೆಸಿ ನೆನನಪಿನ ಕಾಣಿಕೆ ನೀಡಿ ಸಮ್ಮಾನಿಸಲಾಯಿತು. ರಂಗತರಂಗ ತಂಡದ ಸಾರಥಿ ಕಾಪು ಲೀಲಾಧರ ಶೆಟ್ಟಿಯವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಕಾಪು ಲೀಲಾಧರ ಶೆಟ್ಟಿಯವರು ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ ಹಾಗೂ ಕಾರ್ಯದರ್ಶಿ ಪ್ರಸನ್ನ ಶೆಟ್ಟಿಯವರನ್ನು ರಂಗತರಂಗದ ವತಿಯಿಂದ ಗೌರವಿಸಿದರು.
ವೇದಿಕೆಯಲ್ಲಿ ಪುಣೆ ಬಂಟರ ಸಂಘದ ಉಪಾಧ್ಯಕ್ಷ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಕೆ.ಅಜಿತ್ ಹೆಗ್ಡೆ ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ, ಪುಣೆ ರೆಸ್ಟೋರೆಂಟ್ ಮತ್ತು ಹೋಟೆಲಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಶೆಟ್ಟಿ, ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷ ವಿಜಯ್ ಶೆಟ್ಟಿ ಬೋರ್ಕಟ್ಟೆ, ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷ ಗಣೇಶ್ ಹೆಗ್ಡೆ ಪುಂಚೂರು, ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕಡ್ತಲ, ಪುಣೆ ತುಳುಕೂಟದ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ, ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ, ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಶೆಟ್ಟಿ ಮತ್ತು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉತ್ತರ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳಾದ ಪ್ರಸನ್ನ ಶೆಟ್ಟಿ, ಸತೀಶ್ ಶೆಟ್ಟಿ, ನಾರಾಯಣ ಹೆಗ್ಡೆ, ಉದಯ್ ಶೆಟ್ಟಿ, ರಾಜಾರಾಮ್ ಶೆಟ್ಟಿ, ವಸಂತ್ ಶೆಟ್ಟಿ, ಹರೀಶ್ ಶೆಟ್ಟಿ, ದಿವಾಕರ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಆಕಾಶ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಸುನಿಲ್ ಶೆಟ್ಟಿ, ಕರುಣಾಕರ್ ಶೆಟ್ಟಿ, ರೂಪೇಶ್ ಶೆಟ್ಟಿ, ರಘು ಶೆಟ್ಟಿ, ಯೋಗೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಆನಂದ್ ಶೆಟ್ಟಿ ಮತ್ತಿತರ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಅಕ್ಷತಾ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವರದಿ : ಕಿರಣ್ ರೈ