“ಮುದ್ದು ಕಂದ” ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಮಕ್ಕಳ ದಿನಾಚರಣೆ ಅಂಗವಾಗಿ ದಿನಾಂಕ 14.11.22 ರಂದು ಕುಂದಾಪುರದ ಹೋಟೆಲ್ ಹರಿಪ್ರಸಾದ್ ನ ಅಕ್ಷತಾ ಹಾಲ್ ನಲ್ಲಿ ಜರಗಿತು.
ಸಂಸ್ಥೆಯ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಮುದ್ದುಕಂದ ಸ್ಪರ್ಧೆಯ ಪುಟಾಣಿಗಳಿಗೆ ಬಹುಮಾನ ವಿತರಿಸಿ “ಫೋಟೋಗ್ರಾಫರ್ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಯಾಗಿದ್ದು. ಫೋಟೋಗ್ರಾಫರ್ ಗಳು ಯಾವಾಗಲೂ ಶುಭ ವನ್ನು ಬಯಸುತ್ತಾರೆ, ಎಲ್ಲರ ಮನೆಯಲ್ಲೂ ಶುಭ ಕಾರ್ಯಗಳು ನಡೆಯಲಿ ಎಂದು ಹಾರೈಸುತ್ತಾರೆ” ಎಂದು ಹೇಳಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ಜಮದಗ್ನಿ, ಸಲಹಾ ಸಮಿತಿಯ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಕೋಶಾಧಿಕಾರಿ ವಿಠ್ಠಲ ನಾಗೂರು, ನಿಕಟ ಪೂರ್ವ ಅಧ್ಯಕ್ಷ ರಾಜಾ ಮಠದ ಬೆಟ್ಟು, ಉಪಾಧ್ಯಕ್ಷರಾದ ಪ್ರಕಾಶ್ ಹೆಗ್ಡೆ, ಶೀನ ದೇವಾಡಿಗ, ಉಪಸ್ಥಿತರಿದ್ದರು.
ಛಾಯಾ ಕಾರ್ಯದರ್ಶಿ ಪ್ರಮೋದ್ ಚಂದನ್ ಸ್ವಾಗತಿಸಿದರು. ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.