ಮುಂಬಯಿಯ ಖ್ಯಾತ ಇಂಡಸ್ಟ್ರೀಯಲಿಸ್ಟ್ ಅಲ್ಲದೇ ಮುಂಬೈ ನ ಬಂಟರ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಕಾರ್ಯ ನಿರ್ವಹಿಸಿ ಯಶಸ್ವಿಯಾದ ಸಮಾಜಸೇವಕ ಶ್ರೀ ಮಹೇಶ್ ಎಸ್.ಶೆಟ್ಟಿ ( ಬಾಬಾ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕರು ) ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಇವರು ಈ ಹಿಂದೆ ಒಕ್ಕೂಟದ ಪೋಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.