ಬಂಟರ ಯಾನೆ ನಾಡವರ ಮಾತೃ ಸಂಘ (ರಿ), ದ.ಕ. ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿ ವತಿಯಿಂದ 2022-23ನೇ ಸಾಲಿನ ಕುಂದಾಪುರ ಪ್ರತಿಷ್ಟಿತ ಆಡ್ವರ್ಡ್ ಮೆಮೋರಿಯಲ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರನ್ನು ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ ವಹಿಸಿದ್ದರು. ಚಿತ್ತರಂಜನ್ ಹೆಗ್ಡೆ ಅವರು ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕುಂದಾಪುರ ಭೂ ನ್ಯಾಯ ಮಂಡಳಿ ಸದಸ್ಯರು ಹಾಗೂ ಹಲವಾರು ಸಂಘ ಸಂಸ್ಥೆಗಳ ಸದಸ್ಯರಾಗಿದ್ದಾರೆ. ಇವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಜೊತೆ ಕಾರ್ಯದರ್ಶಿಯಾದ ಸಂಪಿಗೇಡಿ ಸಂಜೀವ ಶೆಟ್ಟಿ ಸನ್ಮಾನಿಸಿದರು.
ತಾಲೂಕು ಸಮಿತಿಯ ಸದಸ್ಯರಾದ ಕಾವ್ರಾಡಿ ಸಂಪತ್ ಕುಮಾರ್ ಶೆಟ್ಟಿಯವರು ಪುರಸ್ಕೃತರನ್ನು ಪರಿಚಯಿಸಿದರು. ತಾಲೂಕು ಸಮಿತಿ ಸದಸ್ಯರಾದ ಕೆಂಚನೂರು ಸೋಮಶೇಖರ ಶೆಟ್ಟಿ, ರೋಹಿತ್ ಕುಮಾರ್ ಶೆಟ್ಟಿ, ಸುಪ್ರೀತಾ ದೀಪಕ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕಿನ ಮಲ್ಯಾಡಿ ಶಿವರಾಮ ಶೆಟ್ಟಿ ಕೆ, ರಮೇಶ ಶೆಟ್ಟಿ ಗುಲ್ವಾಡಿ ಉಪಸ್ಥಿತರಿದ್ದರು. ತಾಲೂಕು ಸಮಿತಿ ಸಹ ಸಂಚಾಲಕರಾದ ವಿಕಾಸ್ ಹೆಗ್ಡೆ ಕೋಳ್ಕೆರೆ ವಂದಿಸಿದರು.