ಕೇದಾರೋತ್ಥಾನ ಟ್ರಸ್ಟ್ (ರಿ.) ಉಡುಪಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ “ಹಡಿಲು ಭೂಮಿ ಕೃಷಿ ಅಂದೋಲನ” ನಡೆಸಿ ಹಡಿಲು ಬಿಟ್ಟ ಕೃಷಿ ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ “ಉಡುಪಿ ಕೇದಾರ ಕಜೆ” ಮಹಾರಾಷ್ಟ್ರದ ಪುಣೆಯಲ್ಲಿ ಡಿ. 17 ರಂದು ಮಾರುಕಟ್ಟೆ ಬಿಡುಗಡೆ ಮಾಡಲಾಗುವುದು.
“ಉಡುಪಿ ಕೇದಾರ ಕಜೆ” ಕುಚ್ಚಲಕ್ಕಿ ಮಹಾರಾಷ್ಟ್ರದ ಪುಣೆಯಲ್ಲಿ ಬಿಡುಗಡೆ ಮಾಡುವ ಸಂಬಂಧ ಇಂದು ದಿನಾಂಕ 07-12-2022 ರಂದು ಪುಣೆಯ ವಿವಿಧ ಸಂಘ ಸಂಸ್ಥೆಯವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಸಭೆ ನಡೆಸಿ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿದರು.
ರೈತರಿಗೆ ಪ್ರೋತ್ಸಾಹ ನೀಡಬೇಕು. ಎಲ್ಲರೂ ಕೃಷಿ ಮಾಡುವಂತೆ ಪ್ರೇರೇಪಿಸಬೇಕು ಎಂಬ ಉದ್ದೇಶದಿಂದ ಕೇದಾರೋತ್ಥಾನ ಟ್ರಸ್ಟ್ (ರಿ.) ಉಡುಪಿ ಮುನ್ನಡಿಯಿಟ್ಟಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ “ಹಡಿಲು ಭೂಮಿ ಕೃಷಿ ಅಂದೋಲನ” ಮಾಡಿ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯುವ ಕುಚ್ಚಲಕ್ಕಿಯನ್ನು ಉಡುಪಿ – ಮಂಗಳೂರು ಮೂಲದವರು ಇರುವ ದೇಶದ ಎಲ್ಲಾ ಭಾಗಗಳಲ್ಲಿ ಮಾರಾಟ ಮಾಡಲು ನಿರ್ಧರಿಸಿರುವಂತೆ ಪುಣೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು, ಪ್ರಧಾನ ಕಾರ್ಯದರ್ಶಿ ಅಜಿತ್ ಕೆ. ಹೆಗ್ಡೆ , ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಪದಾಧಿಕಾರಿಗಳಾದ ಸತೀಶ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ನಿಟ್ಟೆ, ದಿನೇಶ್ ಶೆಟ್ಟಿ ಕಳತ್ತೂರು, ಮಾಧವ ಆರ್ ಶೆಟ್ಟಿ, ಸುಧೀರ್ ಶೆಟ್ಟಿ ಕಣಂಜಾರು ಕೊಳಕೆಬೈಲು, ವಿವೇಕಾನಂದ ಶೆಟ್ಟಿ ಆವರ್ಸೆ, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್ ಶೆಟ್ಟಿ, ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ, ಮಾಜಿ ಅಧ್ಯಕ್ಷ ವಿಶ್ವನಾಥ ಡಿ ಶೆಟ್ಟಿ, ಎರ್ಮಾಳ್ ವಿಶ್ವನಾಥ ಶೆಟ್ಟಿ, ತುಳು ಸಂಘ ಪಿಂಪ್ರಿ ಚಿಂಚ್ವಾಡ್ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ, ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶೇಖರ್ ಸಿ ಶೆಟ್ಟಿ, ಶ್ರೀ ಅಯ್ಯಪ್ಪ ಸ್ವಾಮಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಪಾಂಗಾಳ, ಹೋಟೆಲ್ ಉದ್ಯಮಿಗಳಾದ ಎರ್ಮಾಳ್ ಬಾಲಚಂದ್ರ ಶೆಟ್ಟಿ, ರಂಜಿತ್ ಶೆಟ್ಟಿ, ಸುಧಾಕರ ಸಿ ಶೆಟ್ಟಿ ರವಿ ಕೆ ಶೆಟ್ಟಿ ಕಾಪು, ಚೇತನ್ ಶೆಟ್ಟಿ, ಅವಿನಾಶ್ ಶೆಟ್ಟಿ, ಲಯನ್ ಚಂದ್ರಹಾಸ್ ಶೆಟ್ಟಿ, ವಸಂತ್ ಶೆಟ್ಟಿ, ವಿನಯ್ ಶೆಟ್ಟಿ, ನಿತಿನ್ ಶೆಟ್ಟಿ ನಿಟ್ಟೆ, ಭಾಸ್ಕರ್ ಪೂಜಾರಿ ಮತ್ತು ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಉಪಸ್ಥಿತರಿದ್ದರು.