ಅಚ್ಲ್ಯಾಡಿ ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್ (ರಿ) ಅಚ್ಲಾಡಿ ಇವರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ದರ್ಸೆ ಇವರ ಪ್ರಾಯೋಜಕತ್ವದಲ್ಲಿ ವಿವೇಕ ಪದವಿ ಪೂರ್ವ ಕಾಲೇಜು ಕೋಟ ಇಲ್ಲಿಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಆತಂಕ ಮತ್ತು ಪರಿಹಾರೋಪಾಯಗಳು ಕುರಿತು ಆಪ್ತ ಸಮಾಲೋಚನೆ ಮತ್ತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ದರ್ಸೆಯ ಕಾರ್ಯದರ್ಶಿ ಹಾಗೂ ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್ನ ಸದಸ್ಯರು ಆದ ಅಜಿತ್ ಶೆಟ್ಟಿ ಕೊತ್ತಾಡಿ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗಿರೀಶ್ ಎಂ ಎನ್ , ವಿವೇಕ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್ ನಾವಡ ಸ್ವಾಗತಿಸಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ವೆಂಕಟೇಶ ಉಡುಪ ಧನ್ಯವಾದ ಸಮರ್ಪಿಸಿದರು.








































































































