ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತು ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದೊಂದಿಗೆ ಮಂಜೂರಾದ ಸುರತ್ಕಲ್ ಸಮೀಪದ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಶ್ರೀಮತಿ ರಜನಿ ರೈ ಇವರ ಮನೆಯ ಭೂಮಿ ಪೂಜೆಯು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಬಡತನದಲ್ಲಿರುವ ಕುಟುಂಬಗಳ ಕಷ್ಟ ಪರಿಹರಿಸುವ ಕೆಲಸ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ತಿಳಿಸಿದರು. ತೀರಾ ಬಡತನದಲ್ಲಿರುವ ಕುಟುಂಬದ ಸದಸ್ಯರು ಪರಿಹಾರ ಬಯಸಿ ಸಲ್ಲಿಸುವ ಅರ್ಜಿಗಳನ್ನು ಯಾವತ್ತೂ ತಿರಸ್ಕರಿಸಿಲ್ಲ. ಪ್ರತಿ ತಿಂಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಯೋಜನೆಯಲ್ಲಿ ಸಮುದಾಯದ ನೂರಾರು ಕುಟುಂಬಗಳಿಗೆ ನೆರವಿನ ಹಸ್ತ ನೀಡಲಾಗುತ್ತಿದೆ. ಬಂಟ ಸಮಾಜದ ಜೊತೆಗೆ ಇತರ ಸಮಾಜದಿಂದ ಬಂದ ಅರ್ಜಿಗಳನ್ನೂ ಪರಿಶೀಲಿಸಿ ಸಹಾಯ ನೀಡಲಾಗಿದೆ. ಕೃಷ್ಣಾಪುರ-ಕಾಟಿಪಳ್ಳ ನಿವಾಸಿ ರಜನಿ ರೈಯವರ ಕಷ್ಟಕ್ಕೆ ಈಗ ಒಕ್ಕೂಟವು ಸುರತ್ಕಲ್ ಬಂಟರ ಸಂಘದೊಂದಿಗೆ ಕೈ ಜೋಡಿಸಿ ನೆರವು ನೀಡಲಾಗುವುದು ಎಂದವರು ತಿಳಿಸಿದರು.
ಈ ಸಂದರ್ಭದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಎಸ್ ಪೂಂಜ, ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ವಸತಿ ಸಮಿತಿ ಸಂಚಾಲಕ ದೇವೇಂದ್ರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ, ಪದಾಧಿಕಾರಿಗಳಾದ ಪ್ರವೀಣ್ ಶೆಟ್ಟಿ, ರತ್ನಾಕರ ಶೆಟ್ಟಿ, ಪುಷ್ಪರಾಜ ಶೆಟ್ಟಿ ಕುಡುಂಬೂರು, ಹರೀಶ್ ಶೆಟ್ಟಿ ಕಾಟಿಪಳ್ಳ, ಪ್ರತಾಪ್ ಶೆಟ್ಟಿ, ಸುಜಾತ ಶೆಟ್ಟಿ, ನಿರ್ದೇಶಕರಾದ ಶ್ರೀಕಾಂತ್ ಶೆಟ್ಟಿ, ಗುಣಶೇಖರ ಶೆಟ್ಟಿ, ಮೀರಾ ಶೆಟ್ಟಿ, ರಮೇಶ್ ಶೆಟ್ಟಿ, ಜಯಂತಿ ಟಿ ಶೆಟ್ಟಿ, ಸುಧಾಕರ ಶೆಟ್ಟಿ ಕೃಷ್ಣಾಪುರ, ಉಮೇಶ್ ಶೆಟ್ಟಿ, ಕಾರ್ಪೋರೇಟರ್ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.